ದೇವಸ್ಥಾನಗಳಲ್ಲಿ ಸ್ವಚ್ಛತಾ ಅಭಿಯಾನ

h14-tenginakai
Published on

ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ ಶ್ರೀ ಭವಾನಿ ಶಂಕರ ದೇವಸ್ಥಾನದ ಆವರಣದಲ್ಲಿ ಭಾನುವಾರ ಸ್ವಚ್ಛತಾ ಅಭಿಯಾನ ನಡೆಯಿತು.
ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಅಯೋಧ್ಯೆಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿವಿಧ ದೇವಸ್ಥಾನಗಳಲ್ಲಿ ಸ್ವಚ್ಛತಾ ಅಭಿಯಾನ ಕೈಗೊಳ್ಳಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ರಾಮನ ಚಿತ್ರವಿರುವ ಧ್ವಜ ನೀಡಿದ್ದಾರೆ. ಅವುಗಳನ್ನು ಮನೆಗಳ ಮೇಲೆ ಕಟ್ಟಬೇಕು. ಅಂದು ನಗರ ಕೇಸರಿಮಯವಾಗಿರಬೇಕೆಂದರು.
ಬಿಜೆಪಿ ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ಸಂತೋಷ ಚವ್ಹಾಣ, ಪ್ರಮುಖರಾದ ದತ್ತಮೂರ್ತಿ ಕುಲಕರ್ಣಿ, ಗೋಪಾಲ ಬದ್ದಿ, ಅಶೋಕ ವಾಲ್ಮೀಕಿ, ರವಿ ನಾಯಕ, ತೋಟಪ್ಪ ನಿಡಗುಂದಿ, ರೂಪಾ ಶೆಟ್ಟಿ, ಉಮಾ ಮುಕುಂದ, ಅಕ್ಕಮ್ಮ ಹೆಗಡೆ, ಸೀಮಾ ಲದ್ವಾ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net