ಉತ್ತಮ ಪರಿಸರ ಆರೋಗ್ಯಕ್ಕೆ ದಾರಿದೀಪ: ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ್ ಹೇಳಿಕೆ

Cleanliness campaign Mandya
Published on

ಮಂಡ್ಯ: ಉತ್ತಮ ಪರಿಸರ ಉತ್ತಮ ಆರೋಗ್ಯಕ್ಕೆ ದಾರಿದೀಪ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ್ ಹೇಳಿದರು.

ನಗರದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರೂ ನಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳೋಣ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಕರ್ತವ್ಯ. ಪರಿಸರ ಉತ್ತಮವಾಗಿದ್ದಾಗ ನಮ್ಮ ಮನಸ್ಸು ಕೂಡ ಸ್ವಚ್ಛವಾಗಿರುತ್ತದೆ. ಜತೆಗೆ ನಮ್ಮ ಮಾನಸಿಕ ಆರೋಗ್ಯ ಕೂಡ ವೃದ್ಧಿಯಾಗುತ್ತದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ-2 ಗಂಗಾಧರಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net