ಕೈಗಾರಿಕಾ ವಸಾಹತುವಿನಲ್ಲಿ ಸ್ವಚ್ಛತಾ ಅಭಿಯಾನ

New Tenginakayi New
Published on

ಹುಬ್ಬಳ್ಳಿ : ಇಲ್ಲಿನ ಗೋಕುಲ ರಸ್ತೆಯ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಬುಧವಾರದಂದು ಸ್ವಚ್ಛತಾ ಅಭಿಯಾನ ನಡೆಸಲಾಯಿತು.

ನಂತರ ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಕಚೇರಿಯಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ಈ ಹಿಂದೆ ನೀಡಿರುವ ಭರವಸೆಯಂತೆ ಈ ಕೈಗಾರಿಕಾ ವಸಾಹತುವಿನಲ್ಲಿ ನಿತ್ಯ ತ್ಯಾಜ್ಯ ಸಂಗ್ರಹಕ್ಕೆ ಆಟೋ ಟಿಪ್ಪರ್ ನೀಡಲಾಗಿದೆ ಎಂದರು.

ಕೈಗಾರಿಕಾ ವಸಾಹತುನಲ್ಲಿ ಆಸ್ತಿ ತೆರಿಗೆ ಕಡಿಮೆ ಮಾಡಲು ಈ ಹಿಂದೆ ಸಂಘದಿಂದ ಮನವಿ ಮಾಡಲಾಗಿತ್ತು. ಈ ಕುರಿತು ಆಯುಕ್ತರಿಗೆ ಸೂಚಿಸಿದ್ದಾಗಿ ಹೇಳಿದರು.

ಈ ಪ್ರದೇಶದಲ್ಲಿ ಬೀದಿ ದೀಪ ಅಳವಡಿಸಲು ಈಗಾಗಲೇ ಸಂಬಂಧಿಸಿದ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ಅಶೋಕ ಪಾಟೀಲ ಮಾತನಾಡಿ, ಕಳೆದ 30-40 ವರ್ಷಗಳಿಂದ ಈ ಪ್ರದೇಶದಲ್ಲಿ ಕಸ ತೆಗೆಯಲು ಯಾರೊಬ್ಬರೂ ಕ್ರಮ ಕೈಗೊಂಡಿರಲಿಲ್ಲ. ಶಾಸಕ ಮಹೇಶ ಟೆಂಗಿನಕಾಯಿ ಅವರು ಈ ಹಿಂದೆ ನೀಡಿರುವ ಭರವಸೆಯಂತೆ ಈ ಭಾಗದಲ್ಲಿನ ತ್ಯಾಜ್ಯ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದರು.

ಪಾಲಿಕೆ ಸದಸ್ಯೆ ರೂಪಾ ಶೆಟ್ಟಿ,ಸಂಘದ ಕಾರ್ಯದರ್ಶಿ ಶ್ರೀಪತಿ ಭಟ್, ಅಶೋಕ ಕುನ್ನೂರ, ನಾಗೇಶ ರಿತ್ತಿ, ಸಂದೀಪ ಬಿಡಸಾರಿಯ, ಹು-ಧಾ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಧ್ಯಕ್ಷ ರಾಜು ಕಾಳೆ, ಬಿಜೆಪಿ ಮುಖಂಡರಾದ ರವಿ ನಾಯಕ, ರವಿರಾಜ ಕೊಡ್ಲಿ, ಅಕ್ಕಮ್ಮ ಹೆಗಡೆ, ಪಾಲಿಕೆ ಸಹಾಯಕ ಆಯುಕ್ತ ಆನಂದ ಕಾಂಬಳೆ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net