ಎನ್‌ಸಿಸಿ ದಿನಾಚರಣೆ ಹಿನ್ನೆಲೆ ಸ್ವಚ್ಛತಾ ಕಾರ್ಯ

ಎನ್‌ಸಿಸಿ ದಿನಾಚರಣೆ ಹಿನ್ನೆಲೆ ಸ್ವಚ್ಛತಾ ಕಾರ್ಯ
Published on

ಸುಂಟಿಕೊಪ್ಪ: ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಎನ್‌ಸಿಸಿ ದಿನಾಚರಣೆಯ ಅಂಗವಾಗಿ ಸ್ಥಳೀಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇತ್ತೀಚೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ.ವಿಜಯ್ ಕುಮಾರ್ ನೇತೃತ್ವದಲ್ಲಿ ಎನ್‌ಸಿಸಿ ಕೆಡೆಟ್ ವಿದ್ಯಾರ್ಥಿಗಳು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತಲೂ ಸ್ವಚ್ಛಗೊಳಿಸಿದರು. ಸ್ವಚ್ಛತೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಪ್ರಾಂಶುಪಾಲ ಸೆಲ್ವರಾಜ್, ಸಿಟಿಒ ಹಮೀದ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net