ಸ್ವಚ್ಛತಾ ಹೀ ಸೇವಾ ಅಭಿಯಾನ

28 MDL 03
ಮುದಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ ನಡೆಯಿತು.
Published on

ಮುದಗಲ್: ಸ್ಥಳೀಯ ಶ್ರೀಮತಿ ಪದ್ಮಾವತಿಬಾಯಿ ರಾಘವೇಂದ್ರರಾವ್ ದೇಶಪಾಂಡೆ ಪಿಕಳಿಹಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ ಶನಿವಾರ ಹಮ್ಮಿಕೊಳ್ಳಲಾಗಿತ್ತು.

ಕಾಲೇಜಿನಿಂದ ಮುದಗಲ್ ಪ್ರಮುಖ ರಸ್ತೆಗಳಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಸ್ವಚ್ಛತೆ ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರ ಅಭಿಯಾನದ ಘೋಷಣೆ ಕೂಗುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

ಪ್ರಮುಖ ರಸ್ತೆಗಳಲ್ಲಿ ಬಿದ್ದ ಪ್ಲಾಸ್ಟಿಕ್ ಹಾಗೂ ಕಾಗದದಂತಹ ವಸ್ತುಗಳನ್ನು ಸಂಗ್ರಹಿಸಿಕೊಂಡು ಸ್ವಚ್ಛತೆಯ ಪರಿಜ್ಞಾನವನ್ನು ಸಾರ್ವಜನಿಕರಲ್ಲಿ ಮೂಡಿಸುವಲ್ಲಿ ವಿದ್ಯಾರ್ಥಿಗಳು ಮುಂದಾದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net