ವಾರ್ಡ್‌ನಲ್ಲಿ ಒಂದರಂತೆ ವಾರ್ಡ್‌ನಲ್ಲಿ ಸ್ವಚ್ಛತೆ

08-01-Shiva-4
ರಾಯಚೂರಿನ ಬ್ರಹ್ಮಕುಮಾರಿ ಈಶ್ವರೀಯ ಮಹಾವಿದ್ಯಾಲಯದಲ್ಲಿ ನಗರಸಭೆಯಿಂದ ಸೋಮವಾರ ಹಮ್ಮಿಕೊಂಡಿದ್ದ ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಕಾರಿ ಜಗದೀಶ್ ಗಂಗಣ್ಣನವರ್ ಮಾತನಾಡಿದರು. ಮಹಾವಿದ್ಯಾಲಯದ ಮುಖ್ಯಸ್ಥೆ ಸ್ಮೀತಾ ಅಕ್ಕ, ನಗರಸಭೆ ಪೌರಾಯುಕ್ತ ಗುರುಸಿದ್ಧಯ್ಯ ಹಿರೇಮಠ ಇದ್ದರು.
Published on

ರಾಯಚೂರು: ನಗರವನ್ನು ಸ್ವಚ್ಛ ಮತ್ತು ಸುಂದರವನ್ನಾಗಿ ಮಾಡುವ ನಿಟ್ಟಿನಲ್ಲಿ ನಗರಸಭೆಯಿಂದ ವಾರಕ್ಕೊಂದು ವಾರ್ಡ್‌ನಲ್ಲಿ ಸ್ವಚ್ಛತೆ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಕಾರಿ ಜಗದೀಶ್ ಗಂಗಣ್ಣನವರ್ ತಿಳಿಸಿದರು.
ಸ್ಥಳೀಯ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದಲ್ಲಿ ನಗರಸಭೆಯಿಂದ ಸೋಮವಾರ ಹಮ್ಮಿಕೊಂಡಿದ್ದ ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಮತ್ತು ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿ, ನಗರಸಭೆ ಕಾರ್ಯಕ್ಕೆ ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಜನರು ನಗರವನ್ನು ತಮ್ಮ ಮನೆಯಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸ್ವಚ್ಛತೆಗಾಗಿ ಲಾಟರಿ ಮೂಲಕ ವಾರ್ಡ್‌ಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಸಿಬ್ಬಂದಿಗಳೊಂದಿಗೆ ಸ್ವಚ್ಛತೆ ಕಾರ್ಯಕ್ಕೆ ಜನರು ಕೈಜೋಡಿಸಬೇಕು ಎಂದು ಜಗದೀಶ್ ಗಂಗಣ್ಣನವರ್ ಹೇಳಿದರು.
ಬ್ರಹ್ಮಕುಮಾರಿ ಈಶ್ವರೀಯ ಮಹಾವಿದ್ಯಾಲಯದ ಮುಖ್ಯಸ್ಥೆ ಸ್ಮೀತಾ ಅಕ್ಕ ಮಾತನಾಡಿ, ನಗರಸಭೆ ನಗರದ ಸಂಪೂರ್ಣ ಸ್ವಚ್ಛತೆಗಾಗಿ ವಿಶೇಷ ಪ್ರಯತ್ನ ನಡೆಸುತ್ತಿದ್ದು, ಅದಕ್ಕೆ ನಾವೆಲ್ಲರೂ ಕೈಜೋಡಿಸುವ ಮೂಲಕ ಸ್ವಚ್ಛ, ಸುಂದರವನ್ನಾಗಿ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ನಗರಸಭೆ ಪೌರಾಯುಕ್ತ ಗುರುಸಿದ್ಧಯ್ಯ ಹಿರೇಮಠ, ಮುಖಂಡ ಪವನ ಪಾಟೀಲ್, ನಗರಸಭೆ ಸಿಬ್ಬಂದಿ ಹಾಗೂ ವಾರ್ಡ್‌ನ ಜನರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net