

ಸವಣೂರ: ಕಸ ಎಲ್ಲೆಂದರಲ್ಲಿ ಎಸೆಯದೇ ತ್ಯಾಜ್ಯ ವಿಲೇವಾರಿ ವಾಹನಕ್ಕೆ ನೀಡುವ ಮೂಲಕ ಸ್ವಚ್ಛ ನಗರವನ್ನಾಗಿಸಲು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ನೀಲಪ್ಪ ಹಾದಿಮನಿ ಹೇಳಿದರು.
ಪಟ್ಟಣದ ಸರ್ಕಾರಿ ಉರ್ದು ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಪುರಸಭೆ ವತಿಯಿಂದ ಸ್ವಚ್ಛ ಭಾರತ ಮಿಷನ್ ಯೋಜನೆಯ ಸ್ವಭಾವ ಸ್ವಚ್ಛತೆ&ಸಂಸ್ಕಾರ ಸ್ವಚ್ಛತೆ ಧ್ಯೇಯದೊಂದಿಗೆ ಬುಧವಾರ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾಥಿರ್ಗಳು ಶುಚ್ಚಿತ್ವದ ಅರಿವು ಹೊಂದಿದಾಗ ಆರೋಗ್ಯಯುತ ಜೀವನ ಸಾಧ್ಯ ಎಂದರು.
ಶಿಕ್ಷಕರು, ವಿದ್ಯಾಥಿರ್ಗಳು ಹಾಗೂ ಸಾರ್ವಜನಿಕರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಪುರಸಭೆ ಅಧ್ಯಕ್ಷ ಅಲ್ಲಾವುದ್ದೀನ್ ಮನಿಯಾರ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಫಿರ್ಅಹ್ಮದ ಗವಾರಿ, ಫಜಲ್ ಅಹ್ಮದಖಾನ್ ಪಠಾಣ, ಎಂ.ಎಸ್. ಚಂದುಬಾಯಿ, ಶಾಲೆಯ ಮುಖ್ಯ ಶಿಕ್ಷಕ ಆರ್.ಕೆ. ಸಂಕನೂರ, ಸುರೇಶ ತಳವಾರ ಇತರರಿದ್ದರು.