

ಬೆಂಗಳೂರು: ಸಂಪಂಗಿರಾಮನಗರದ ವಾರ್ಡ್ ಸಂಖ್ಯೆ 110ರಲ್ಲಿರುವ ಅಂಗನವಾಡಿ ಕೇಂದ್ರದ ಸುತ್ತಮುತ್ತ ತ್ಯಾಜ್ಯ ಸೇರಿಕೊಂಡಿದೆ. ಮಳೆನೀರು ನಿಲ್ಲುತ್ತಿದ್ದು, ವಿದ್ಯಾರ್ಥಿಗಳು ಸಾಂಕ್ರಾಮಿಕ ರೋಗಕ್ಕೆ ತುತ್ತಾಗುವ ಅಪಾಯವಿದೆ. ಜತೆಗೆ ಶೌಚಗೃಹ ಸರಿಯಾಗಿ ನಿರ್ವಹಣೆಯಾಗುತ್ತಿಲ್ಲ ಎಂದು ಪಾಲಕರು ಆತಂಕ ವ್ಯಕ್ತಪಡಿಸಿದ್ದಾರೆ.
ಎಲ್ಲಡೆ ಡೆಂಗ್ಯೂ, ಮಲೇರಿಯಾ ಭೀತಿಯಿದ್ದು, ಇಂತಹ ಪರಿಸ್ಥಿತಿಯಲ್ಲಿ ಅಂಗನವಾಡಿ ಕೇಂದ್ರದ ಪರಿಸರದಲ್ಲಿ ಶುಚಿತ್ವ ಅಗತ್ಯ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪಾಲಕರು ಆಗ್ರಹಿಸಿದ್ದಾರೆ.