ಸ್ವಚ್ಛತೆಯೇ ಸೇವೆ ಅಭಿಯಾನ 2024 ಕಾರ್ಯಕ್ರಮ

Cleanliness is Service Abhiyan 2024 programme
Published on

ಮಡಿಕೇರಿ:

ಕರ್ನಾಟಕ ಗ್ರಾಮೀಣ ಬ್ಯಾಂಕ್ ಮಡಿಕೇರಿ ಪ್ರಾದೇಶಿಕ ಕಚೇರಿ ವತಿಯಿಂದ ನಗರದಲ್ಲಿ ಬುಧವಾರ ಸ್ವಚ್ಛತೆಯೇ ಸೇವೆ ಅಭಿಯಾನ 2024 ಹಿನ್ನೆಲೆ ವಿವಿಧೆÀಡೆ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಈ ಸಂದರ್ಭ ಮಾತನಾಡಿದ ಪ್ರಾದೇಶಿಕ ವ್ಯವಸ್ಥಾಪಕ ಉದಯ್ ಕುಮಾರ್, ನಮ್ಮ ಮನೆಯ ಸುತ್ತಮುತ್ತಲ ಪ್ರದೇಶ ಹಾಗೂ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕೇವಲ ಒಬ್ಬಿಬ್ಬರಿಂದ ಇಂತಹ ಕಾರ್ಯ ಸಾಧ್ಯವಿಲ್ಲ. ಪ್ರತಿಯೊಬ್ಬರೂ ಕೈಜೋಡಿಸಿದಾಗ ಬದಲಾವಣೆ ಸಾಧ್ಯವಿರುತ್ತದೆ. ಸ್ವಚ್ಛತಾ ಕಾರ್ಯಕ್ರಮ ಒಂದು ಅವಧಿಗೆ ಸೀಮಿತವಾಗಿರದೇ ನಿರಂತರ ಅಭಿಯಾನವಾದಾಗ ಸ್ವಚ್ಛ ನಗರವಾಗಲು ಸಾಧ್ಯ. ಪರಿಸರ ಸ್ವಚ್ಛತೆಯಿಂದ ಮನುಷ್ಯನ ಆರೋಗ್ಯ ಉತ್ತಮವಾಗುತ್ತದೆ. ಹಾಗಾಗಿ, ಎಲ್ಲರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡಲು ಹೆಚ್ಚಿನ ಒತ್ತು ನೀಡಬೇಕಿದೆ. ಪ್ರಕೃತಿಗೆ ವಿರುದ್ಧವಾಗಿ ಪ್ರತಿಕ್ರಿಯಿಸಿದಾಗ, ಅದು ಮನುಷ್ಯನ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಪರಿಸರವನ್ನು ಹಾಳಗೆಡಹದೆ, ಶುಚಿತ್ವÀ ಕಾಪಾಡಿಕೊಳ್ಳಬೇಕು ಎಂದರು.

ಅಭಿಯಾನದ ಹಿನ್ನೆಲೆ ನಗರದ ಮುನ್ಸಿಪಾಲ್ ಪೌರಕಾರ್ಮಿಕರಾದ ಲಕ್ಷ್ಮೀ ಮತ್ತು ಮುರುಘಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೆ ವೇಳೆ ಸ್ವಚ್ಛತೆಯ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕಚೇರಿಯ ಹಿರಿಯ ವ್ಯವಸ್ಥಾಪಕ ಎಂ.ಎ. ರವಿಚಂದ್ರ, ವ್ಯವಸ್ಥಾಪಕ ವಿಶ್ವಾಸ್, ವೇಣುಗೋಪಾಲ್, ಜಗದೀಶ್, ಕಿಶೋರ್ ಕುಮಾರ್ ಸೇರಿದಂತೆ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net