ಕೂಡ್ಲೂರು ಹೈಸ್ಕೂಲ್‌ನಲ್ಲಿ ಸ್ವಚ್ಛತೆಯೇ ಸೇವೆ

Cleanliness is service in Cuddalore High School
Published on

ಕುಶಾಲನಗರ:

ಪ್ರತಿಯೊಬ್ಬರೂ ನಮ್ಮ ಸುತ್ತಲಿನ ಪರಿಸರ ಸ್ವಚ್ಛತೆ ಜತೆಗೆ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡಿಕೊಂಡು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಸಂಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಟಿ.ಜಿ. ಪ್ರೇಮಕುಮಾರ್ ಮನವಿ ಮಾಡಿದರು.

ಕುಶಾಲನಗರ ತಾಲೂಕು ಕೂಡುಮಂಗಳೂರು ಗ್ರಾಮ ಪಂಚಾಯತಿ ಸಹಯೋಗದೊಂದಿಗೆ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಚ್ಛ ಭಾರತ ಅಭಿಯಾನ ಯೋಜನೆಯಡಿ ಮಂಗಳವಾರ (ಅ.1) ಏರ್ಪಡಿಸಿದ್ದ ಸ್ವಚ್ಛತೆಯೇ ಸೇವೆ ಆಂದೋಲನದಲ್ಲಿ ಮತನಾಡಿದರು.

ಪ್ರತಿಯೊಬ್ಬರು ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟಾಗ ಮಾತ್ರ ನಮ್ಮ ಪರಿಸರ ಮತ್ತು ಗ್ರಾಮ ಸುಂದರವಾಗಿ ಕಾಣಲು ಸಾಧ್ಯ. ಹಾಗಾಗಿ, ಎಲ್ಲರೂ ಸ್ವಚ್ಚತೆಗೆ ಮೊದಲ ಆದ್ಯತೆ ನೀಡುವ ಮೂಲಕ ಸ್ವಚ್ಛ ಭಾರತ ಅಭಿಯಾನ ಯಶಸ್ವಿಗೆ ಸಹಕರಿಸಬೇಕು ಎಂದರು.

ಶಾಲೆಯ ಇಕೋ ಕ್ಲಬ್ ಉಸ್ತುವಾರಿ ಶಿಕ್ಷಕಿ ಬಿ.ಡಿ. ರಮ್ಯಾ, ಶಿಕ್ಷಕರಾದ ಕೆ. ಗೋಪಾಲಕೃಷ್ಣ, ಎಂ.ಟಿ. ದಯಾನಂದ್ ಪ್ರಕಾಶ್, ಎಸ್.ಎಂ. ಗೀತಾ, ಬಿ.ಎನ್.ಸುಜಾತ, ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ, ವಿದ್ಯಾರ್ಥಿಗಳು ಇದ್ದರು.
ನಂತರ ನಡೆದ ಪರಿಸರ ಜಾಗೃತಿ ಅಭಿಯಾನದಲ್ಲಿ ವಿದ್ಯಾರ್ಥಿಗಳು ಸ್ವಚ್ಛತೆಯೇ ಸೇವೆ ಕುರಿತು ವಿವಿಧ ಪರಿಸರ, ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಪರಿಸರ ಘೋಷಣೆಗಳನ್ನು ಕೂಗಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net