

ಬೀರೂರು: ಹುಲ್ಲೇಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ಜನ್ಮದಿನದ ಸ್ಮರಣಾರ್ಥ ಬುಧವಾರ ಸ್ವಚ್ಛತಾ ಅಭಿಯಾನಕ್ಕೆ ಗ್ರಾಪಂ ಉಪಾಧ್ಯಕ್ಷ ಎಂ.ಲಕ್ಷ್ಮಣ್ ಚಾಲನೆ ನೀಡಿದರು.
ಸದೃಢ ಭಾರತ ನಿರ್ಮಾಣಕ್ಕೆ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ. ಕಸಮುಕ್ತ ಭಾರತ ಎಂದು ಘೋಷಿಸಲಾಗಿದ್ದು, ಗ್ರಾಮಗಳನ್ನು ಸುಂದರವಾಗಿಸುವುದು ಉದ್ದೇಶ. ಗ್ರಾಪಂ ವ್ಯಾಪ್ತಿಯಲ್ಲಿ ಶಿಕ್ಷಕರು, ಮಕ್ಕಳು ಹಾಗೂ ಅಧಿಕಾರಿಗಳನ್ನು ಒಳಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ನರಸಿಂಹಮೂರ್ತಿ, ಕಚೇರಿ ಸಿಬ್ಬಂದಿ ಮಂಜುನಾಥ್, ಮುಖ್ಯಶಿಕ್ಷಕಿ ಶಂಕರಮ್ಮ, ಶಿಕ್ಷಕ ಕುಮಾರಸ್ವಾಮಿ, ಗ್ರಾಮದ ಚಂದ್ರಪ್ಪ, ಮಂಜುನಾಥ ಇದ್ದರು.