

ಮೈಸೂರು: ಗಾಂಧಿ ಜಯಂತಿ ಪ್ರಯುಕ್ತ ನಗರ ಪಾಲಿಕೆ ವತಿಯಿಂದ ಬುಧವಾರ ನಗರದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಮ್ಯಾರಥಾನ್‌ನಲ್ಲಿ ಶಿವಾನಂದ್ ಪ್ರಥಮ ಬಹುಮಾನ ಪಡೆದುಕೊಂಡರು.
ಪುರುಷೋತ್ತಮ್ ದ್ವಿತೀಯ, ರಘುವರನ್ ತೃತೀಯ ಬಹುಮಾನ ಪಡೆದರು. ಮಹಿಳೆಯರ ವಿಭಾಗದಲ್ಲಿ ಜಯಶ್ರೀ ಪ್ರಥಮ ಬಹುಮಾನ ಪಡೆದರು. ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಆವರಣದಲ್ಲಿ ಮ್ಯಾರಥಾನ್‌ಗೆ ಚಾಲನೆ ದೊರೆಯಿತು. ಸ್ವಚ್ಛತಾ ಮ್ಯಾರಥಾನ್ ಕೆ.ಆರ್. ವೃತ್ತ, ದೇವರಾಜ ಅರಸು ರಸ್ತೆ, ಜೆಎಲ್‌ಬಿ ರಸ್ತೆ, ರಾಮಸ್ವಾಮಿ ವೃತ್ತ, ಚಾಮರಾಜ ಜೋಡಿ ರಸ್ತೆ, ಗನ್‌ಹೌಸ್, ಅರಮನೆ ಮುಖ್ಯ ರಸ್ತೆ, ಜಯಚಾಮರಾಜ ಒಡೆಯರ್ ವೃತ್ತ, ಆಲ್ಬರ್ಟ್ ವಿಕ್ಟರ್ ರಸ್ತೆ ಮೂಲಕ ಸಾಗಿ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಆವರಣದಲ್ಲಿ ಅಂತ್ಯಗೊಂಡಿತು. ಸ್ವಚ್ಛತಾ ಮ್ಯಾರಥಾನ್‌ನಲ್ಲಿ 500ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ನಗರ ಪಾಲಿಕೆ ಆಯುಕ್ತ ಆಸಾದ್ ಉರ್ ರೆಹಮಾನ್ ಷರೀಫ್, ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಹಾಗೂ ಇತರರು ಇದ್ದರು.