ಶ್ರದ್ಧಾಕೇಂದ್ರಗಳ ಸ್ವಚ್ಛತೆ

nrp school
ಎನ್.ಆರ್.ಪುರ ತಾಲೂಕು ಬಿ.ಎಚ್.ಕೈಮರದ ಸರ್ಕಾರಿ ಶಾಲೆ ಮುಖ್ಯಶಿಕ್ಷಕಿ ವೀಣಾ ಹಾಗೂ ಮಕ್ಕಳಿಗೆ ಸ್ವಚ್ಛತಾ ಪರಿಕರಗಳನ್ನು ವಿತರಿಸಲಾಯಿತು. ಅನ್ನಪೂರ್ಣ, ಶಿಬಿ, ನಾಗರಾಜ್ ಇತರರಿದ್ದರು.
Published on

ಎನ್.ಆರ್.ಪುರ: ಸ್ವಾತಂತ್ರೊೃೀತ್ಸವ ಪ್ರಯುಕ್ತ ಧರ್ಮಸ್ಥಳ ಗ್ರಾಮಮಾಭಿವೃದ್ಧಿ ಯೋಜನೆಯಿಂದ ಶ್ರದ್ಧಾಕೇಂದ್ರ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಯೋಜನೆಯ ಬಿ.ಎಚ್.ಕೈಮರದ ವಲಯ ಮೇಲ್ವಿಚಾರಕ ತೀರ್ಥರಾಜ್ ತಿಳಿಸಿದರು.

ಶುಕ್ರವಾರ ಶೀಗುವಾನಿ ಗ್ರಾಮದ ದುರ್ಗಮ್ಮ ದೇವಸ್ಥಾನದಲ್ಲಿ ಧ.ಗ್ರಾ.ಯೋಜನೆಯಿಂದ ಹಮ್ಮಿಕೊಂಡಿದ್ದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿ, ಬಿ.ಎಚ್.ಕೈಮರ ವಲಯ ವ್ಯಾಪ್ತಿಯಲ್ಲಿ ಶಾಲೆ, ಬಸ್ ನಿಲ್ದಾಣ, ದೇವಸ್ಥಾನ ಸೇರಿದಂತೆ 7 ಕಡೆ ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಎಲ್ಲ ಕಡೆ ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲೂ ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಜನರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಸ್ವಸಹಾಯ ಸಂಘದ ಸದಸ್ಯರು ಬಿ.ಎಚ್.ಕೈಮರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿಯನ್ನು ಸ್ವಚ್ಛಗೊಳಿಸಿದರು. ಒಕ್ಕೂಟದ ಅಧ್ಯಕ್ಷ ನಾಗರಾಜ್, ಸೇವಾ ಪ್ರತಿನಿಧಿ ಅನ್ನಪೂರ್ಣ, ವಿಪತ್ತು ನಿರ್ವಹಣಾ ಸಂಯೋಜಕಿ ಶಿಬಿ, ಮುಖ್ಯಶಿಕ್ಷಕರು, ಸಹ ಶಿಕ್ಷಕರು, ಶಾಲೆ, ಮಕ್ಕಳು ಸ್ವಚ್ಛತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮುಖ್ಯಶಿಕ್ಷಕಿ ವೀಣಾ ಹಾಗೂ ಮಕ್ಕಳಿಗೆ ಸ್ವಚ್ಛತಾ ಪರಿಕರಗಳನ್ನು ಹಸ್ತಾಂತರಿಸಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಮೇಲ್ವಿಚಾರಕ ಶಿವಕುಮಾರ್, ಒಕ್ಕೂಟದ ಅಧ್ಯಕ್ಷೆ ಹೆಲನ್, ಸೇವಾ ಪ್ರತಿನಿಧಿ ಅಶ್ವಿನಿ, ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net