ಪ್ರವಾಸಿ ತಾಣಗಳ ಸ್ವಚ್ಛತೆ ಪ್ರತಿಯೊಬ್ಬರ ಕರ್ತವ್ಯ

27-09-Shiva-1
ರಾಯಚೂರಿನ ಅರಣ್ಯ ಇಲಾಖೆಯ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನಕುಮಾರ, ಪಿಯು ಡಿಡಿಪಿಐ ಸೋಮಶೇಖರಪ್ಪ ಹೊಕ್ರಾಣಿ, ವಲಯ ಅರಣ್ಯಾಕಾರಿ ಆಂಜಿನೇಯ, ಗೃಹ ರಕ್ಷಕದಳದ ಜಿಲ್ಲಾ ಸಮಾದೇಷ್ಠ ಜಂಬಣ್ಣ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಪ್ರಭುಲಿಂಗ ತಳಕೇರಿ ಇದ್ದರು.
Published on

ರಾಯಚೂರು: ಜಿಲ್ಲೆ ಐತಿಹಾಸಿಕ ಹಿನ್ನೆಲೆ ಹೊಂದಿದ್ದು, ಇಲ್ಲಿನ ಪ್ರವಾಸಿ ತಾಣಗಳನ್ನು ಸ್ವಚ್ಛ ಮತ್ತು ಸುಂದರವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಹೇಳಿದರು.
ಸ್ಥಳೀಯ ಅರಣ್ಯ ಇಲಾಖೆಯ ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ಜಿಲ್ಲಾಡಳಿತದಿಂದ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಡೆದೊರೆ ನಾಡು ಎಂದು ಪ್ರಸಿದ್ಧಿ ಹೊಂದಿರುವ ಜಿಲ್ಲೆ ಎಲ್ಲ ರೀತಿಯಲ್ಲಿ ಸಂಪದ್ಭರಿತವಾಗಿದೆ ಎಂದರು.
ದೇಶ ಸುತ್ತಬೇಕು ಮತ್ತು ಕೋಶ ಓದಬೇಕು ಎಂಬ ಹಿರಿಯರ ಮಾತಿನಂತೆ ಪ್ರವಾಸದಿಂದ ಜ್ಞಾನ ವೃದ್ಧಿಯಾಗಲಿದ್ದು, ಐತಿಹಾಸಿಕ ಸ್ಥಳಗಳ ಕುರಿತು ಮಾಹಿತಿ ಪಡೆದುಕೊಳ್ಳಲು ಮುಂದಾಗಬೇಕು. ಪ್ರವಾಸೋದ್ಯಮದಿಂದ ದೇಶದ ಆರ್ಥಿಕತೆ ಹೆಚ್ಚಳವಾಗಲಿದೆ.
ಜಿಲ್ಲೆಯಿಂದ ರಾಜ್ಯಕ್ಕೆ ವಿದ್ಯುತ್, ಚಿನ್ನ, ಅಕ್ಕಿ ಹಾಗೂ ಔಷಧ ಉತ್ಪಾದಿಸಿ ನೀಡಲಾಗುತ್ತಿದೆ. ಜಿಲ್ಲೆಯ ಐತಿಹಾಸಿಕ ಹಿನ್ನೆಲೆಯನ್ನು ಅರಿತುಕೊಂಡು ನಮ್ಮ ಸಂಸ್ಕೃತಿಯನ್ನು ಉಳಿಸಿ, ಬೆಳೆಸಿಕೊಂಡು ಹೋಗುವ ಕೆಲಸ ಮಾಡಬೇಕು ಎಂದು ಡಾ.ಕೆ.ಆರ್.ದುರಗೇಶ ಹೇಳಿದರು.
ಶಿಕ್ಷಕ ದಂಡಪ್ಪ ಬಿರಾದರ ಮಾತನಾಡಿ, ಜಿಲ್ಲೆಯಲ್ಲಿ ಅತಿ ದೊಡ್ಡ ಕೃಷಿ ಉತ್ಪನ್ನ ಮಾರುಕಟ್ಟೆ, ಎರಡು ನದಿಗಳು, ಐತಿಹಾಸಿಕ ಹಿನ್ನೆಲೆಯುಳ್ಳ ಕೋಟೆಗಳು, ಪ್ರಸಿದ್ಧ ದೇವಸ್ಥಾನಗಳಿದ್ದು, ಅವುಗಳಿಗೆ ತನ್ನದೇ ಆದ ವೈಶಿಷ್ಠತೆಯನ್ನು ಹೊಂದಿವೆ ಎಂದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನಕುಮಾರ, ಪಿಯು ಡಿಡಿಪಿಐ ಸೋಮಶೇಖರಪ್ಪ ಹೊಕ್ರಾಣಿ, ವಲಯ ಅರಣ್ಯಾಕಾರಿ ಆಂಜಿನೇಯ, ಗೃಹ ರಕ್ಷಕದಳದ ಜಿಲ್ಲಾ ಸಮಾದೇಷ್ಠ ಜಂಬಣ್ಣ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಪ್ರಭುಲಿಂಗ ತಳಕೇರಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net