ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

14
Published on

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು, ಹಿಂದು ಶ್ರದ್ಧಾಕೇಂದ್ರಗಳ ಸಹಯೋಗದೊಂದಿಗೆ ಬಿಳಿನೆಲೆ ವಲಯದ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಸೋಮವಾರ ನಡೆಯಿತು. ಡಾ.ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಮಕರ ಸಂಕ್ರಾಂತಿ ಹಬ್ಬದ ಪೂರ್ವದಲ್ಲಿ ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ಸ್ವಚ್ಛತೆಗೊಳಿಸಿ ಮಕರ ಸಂಕ್ರಾಂತಿ ಹಬ್ಬ ಆಚರಿಸುವ ಸಲುವಾಗಿ ಧರ್ಮಸ್ಥಳ ಯೋಜನೆಯ ಬಿಳಿನೆಲೆ ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರು ಹಾಗೂ ದೇವಸ್ಥಾನ, ದೈವಸ್ಥಾನ, ಭಜನಾ ಮಂದಿರಗಳ ಆಡಳಿತ ಮಂಡಳಿ ಮತ್ತು ಭಕ್ತರ ಸಹಕಾರದೊಂದಿಗೆ 500 ಜನರ ಪಾಲ್ಗೊಳ್ಳುವಿಕೆಯಲ್ಲಿ ಬಿಳಿನೆಲೆ ವಲಯದ ಆರು ದೇವಸ್ಥಾನ, ಎರಡು ದೈವಸ್ಥಾನ ಮತ್ತು ನಾಲ್ಕು ಭಜನಾ ಮಂದಿರಗಳಲ್ಲಿ ಒಳಾಂಗಣ ಹಾಗೂ ಹೊರಾಂಗಣ ಸ್ವಚ್ಛತೆ ನಡೆಯಿತು. ವಲಯದ ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ ಮಾರ್ಗದರ್ಶನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net