ನಂದಿನೇಸರ ಕೆರೆ ಉದ್ಯಾನದಲ್ಲಿ ಸ್ವಚ್ಛತಾ ಕಾರ್ಯ

16ss1NSS students
Published on

ಶನಿವಾರಸಂತೆ: ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಪುರ ಗ್ರಾಮದಲ್ಲಿರುವ ನಂದಿನೇಸರ ಕೆರೆಯ ಉದ್ಯಾನದಲ್ಲಿ ಸ್ವಚ್ಛತಾ ಕಾರ್ಯವನ್ನು ಆಯೋಜಿಸಲಾಗಿತ್ತು.

ಸ್ವಚ್ಛ ಕೊಡಗು ಸುಂದರ ಕೊಡಗು ಅಭಿಯಾನ ಪ್ರಯುಕ್ತ ಸಮೀಪದ ಕೊಡ್ಲಿಪೇಟೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎನ್ನೆಸ್ಸೆಸ್ ವಿದ್ಯಾರ್ಥಿಗಳು ಉದ್ಯಾನವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದರು. ನಂತರ ವಿದ್ಯಾರ್ಥಿಗಳು ಕೊಡ್ಲಿಪೇಟೆ ಬಸ್ ನಿಲ್ದಾಣದಲ್ಲಿನ ತ್ಯಾಜ್ಯವಸ್ತುಗಳನ್ನು ಸ್ವಚ್ಛಗೊಳಿಸಿದರು. ಬಳಿಕ ಸ್ವಚ್ಛ ಕೊಡಗು ಸುಂದರ ಕೊಡಗು ಅಭಿಯಾನ ಕಾರ್ಯಕ್ರಮದ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿ ಅರಿವು ಮೂಡಿಸಿದರು.

ಅಭಿಯಾನದಲ್ಲಿ ಕಾಲೇಜು ಪ್ರಾಂಶುಪಾಲ ಎಂ.ಆರ್.ನಿರಂಜನ್, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕೆ.ಎಚ್.ಯೋಗೇಂದ್ರ, ಉಪನ್ಯಾಸಕರಾದ ಕೆ.ಕೆ.ಅಭಿಲಾಷ್, ರೇಣುಕಾ, ಹರೀಶ್, ಕಾವ್ಯಾ, ಯೋಗಿತಾ, ರಮ್ಯಾ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net