ತಲಕಾವೇರಿಯಿಂದ ಭಾಗಮಂಡಲದವರೆಗೆ ಸ್ವಚ್ಛತಾ ಕಾರ್ಯ

ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯ ನಡೆಸಿದರು.
ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯ ನಡೆಸಿದರು.
Published on

ನಾಪೋಕ್ಲು: ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಮಂಗಳವಾರ ತಲಕಾವೇರಿಯಿಂದ ಭಾಗಮಂಡಲದವರೆಗೆ ಸ್ವಚ್ಛತಾ ಕಾರ್ಯ ನಡೆಯಿತು.

ಎನ್ನೆಸ್ಸೆಸ್ ವಿದ್ಯಾರ್ಥಿಗಳು ರಸ್ತೆಯ ಬದಿಯಲ್ಲಿನ ಪ್ಲಾಸ್ಟಿಕ್, ಪೇಪರ್ ಇತ್ಯಾದಿ ಕಸಗಳನ್ನು ಹೆಕ್ಕಿ ರಸ್ತೆಯನ್ನು ಸ್ವಚ್ಛಗೊಳಿಸಿದರು. ನಂತರ ಭಾಗಮಂಡಲ ಗ್ರಾಮ ಪಂಚಾಯಿತಿಯ ಟ್ರಾಕ್ಟರ್‌ನಲ್ಲಿ ಕಸಗಳನ್ನು ವಿಲೇವಾರಿ ಮಾಡಲಾಯಿತು.

ಅಧಿಕಾರಿಗಳಾದ ದಮಯಂತಿ, ಕಲ್ಪನಾ, ಉಪನ್ಯಾಸಕರಾದ ರೋಹಿಣಿ, ಪೂವಮ್ಮ, ಕಾವೇರಮ್ಮ, ತಂಗಮ್ಮ, ನಿವೇದಿತಾ, ಇತರರಿದ್ದರು. ಮೂರ್ನಾಡು ವಿದ್ಯಾ ಸಂಸ್ಥೆ ಉಪಾಧ್ಯಕ್ಷ ರಾಜಮಾದಪ್ಪ ಅವರ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net