ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ - ದೇವೇಂದ್ರ ಫಡ್ನವಿಸ್

Maharashtra Deputy Chief Minister Devendra Fadnavis
ಇಂಡಿ ಪಟ್ಟಣದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಪಡ್ನವಿಸ್ ಮಾತನಾಡಿದರು. ಕೇಂದ್ರ ಸರ್ಕಾರದ ರಾಜ್ಯ ಸಚಿವ ಬಗವತ್ ಕರಾಟೆ, ಸೋಲಾಪುರ, ಸಂಸದ ಜಯಸಿದ್ಧೇಶ್ವರ ಸ್ವಾಮೀಜಿ, ಉತ್ತರಾಖಂಡದ ಶಿಕ್ಷಣ ಸಚಿವ ಧನಸಿಂಗ್ ರಾವತ್ ಇತರರಿದ್ದರು.
Published on

ಇಂಡಿ: ಈ ಬಾರಿಯೂ ಕರ್ನಾಟಕ ರಾಜ್ಯದಲ್ಲಿ ಬಿಜೆಪಿಗೆ ಸರ್ಕಾರ ಸ್ಪಷ್ಟ ಬಹುಮತದಿಂದ ಆಯ್ಕೆಯಾಗಲಿದ್ದು, ಇಂಡಿ ಮತಕ್ಷೇತ್ರದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದರು.

ಪಟ್ಟಣದ ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೇಂದ್ರದಲ್ಲಿನ ನರೇಂದ್ರ ಮೋದಿ ಸರ್ಕಾರ ಹಾಗೂ ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಗಳು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಜನತೆ ಅಭಿವೃದ್ಧಿಗೆ ಮನಸೋತಿದ್ದಾರೆ. ಮೋದಿ, ಬೊಮ್ಮಾಯಿ ಅವರ ಕೈ ಬಲಪಡಿಸಲು ಈ ಬಾರಿ ಕರ್ನಾಟಕದ ಜನತೆ ಬಿಜೆಪಿಗೆ ಮತ ನೀಡಬೇಕೆಂದು ಮನವಿ ಮಾಡಿದರು.

ಇಂಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಜನರ ಅನುಕೂಲಕ್ಕಾಗಿ ರಾಜಕಾರಣ ಬೆರೆಸದೆ ಅಭಿವೃದ್ಧಿಗಾಗಿ ತಾಲೂಕಿನ ನೀರಾವರಿ ಯೋಜನೆಗಳಿಗೆ ಬಿಜೆಪಿ ಸರ್ಕಾರ ಸಂಪೂರ್ಣ ಅನುದಾನ ಒದಗಿಸಿದೆ. ಈ ಭಾಗದ ಬಡವರು, ದೀನ ದಲಿತರು, ರೈತರು ಸಾಮಾನ್ಯ ಜನರು ಈ ಬಾರಿ ಬಿಜೆಪಿಗೆ ಮತ ನೀಡಬೇಕೆಂದು ಮನವಿ ಮಾಡಿದರು.

ಕೇಂದ್ರ ಸರ್ಕಾರದ ರಾಜ್ಯ ಸಚಿವ ಬಗವತ್ ಕರಾಟೆ, ಸೋಲಾಪುರ ಸಂಸದ ಜಯಸಿದ್ಧೇಶ್ವರ ಸ್ವಾಮೀಜಿ, ಉತ್ತರಾಖಂಡದ ಶಿಕ್ಷಣ ಸಚಿವ ಧನಸಿಂಗ್ ರಾವತ್, ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ, ಸಾಂಗಲಿ ಶಾಸಕ ಸಂಜಯ್ ಪಾಟೀಲ, ಮಲ್ಲಿಕಾರ್ಜುನ ಜೋಗುರ, ಮಾಜಿ ಶಾಸಕ ಡಾ. ಸಾರ್ವಭೌಮ ಬಗಲಿ, ಮಲ್ಲಿಕಾರ್ಜುನ ಕಿವುಡೆ, ಸಿದ್ದಲಿಂಗ ಹಂಜಗಿ, ಶೀಲವಂತ ಉಮರಾಣಿ, ಸಂಜು ದಶವಂತ, ಶಾಂತು ಕಂಬಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net