ಕೋಟೆಗೋಡೆ ಸುತ್ತಲಿನ ಒತ್ತುವರಿ ತೆರವುಗೊಳಿಸಿ; ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

DC MEETING FORT
ವಿಜಯಪುರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳ ಸಭೆ ನಡೆಸಿದರು. ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಮತ್ತಿತರರಿದ್ದಾರೆ.
Published on

ವಿಜಯಪುರ: ಐತಿಹಾಸಿಕ ಕೋಟೆಗೋಡೆ ಸುತ್ತಲಿರುವ ಕಂದಕಗಳನ್ನು ಅತಿಕ್ರಮಣ-ಒತ್ತುವರಿಯಾಗಿರುವುದನ್ನು ತೆರವುಗೊಳಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.

ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿರುವ ಅವರು, ನಗರದ ಮುಖ್ಯ ರಾಜ ಕಾಲುವೆಗಳು, ಮಳೆನೀರು, ಚರಂಡಿಗಳು, ಕೋಟೆಗೋಡೆಯ ಸುತ್ತಲೂ, ನೈಸರ್ಗಿಕ ನಾಲೆಗಳು ಸೇರಿದಂತೆ ಬಹಳಷ್ಟು ಕಡೆಗಳಲ್ಲಿ ಒತ್ತುವರಿಯಾಗಿರುವುದರಿಂದ ಹಾಗೂ ಹೂಳು ತುಂಬಿರುವುದರಿಂದ ಮಳೆ ನೀರು ಸರಾಗವಾಗಿ ಹರಿದು ಹೋಗುತ್ತಿಲ್ಲ. ಇದರಿಂದ ಸಾಕಷ್ಟು ತೊಂದರೆಯಾಗುತ್ತಿದೆ ಎಂದರು.

ಕಂದಕಗಳನ್ನು ಅತಿಕ್ರಮಣ ಮಾಡಿರುವ ಒತ್ತುವರಿದಾರರಿಗೆ ನೋಟಿಸ್ ಜಾರಿ ಮಾಡಬೇಕು. ಕಂದಾಯ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ನಗರದ ಮುಖ್ಯ ರಾಜ್‌ಕಾಲುವೆಗಳು, ಚರಂಡಿಗಳಲ್ಲಾಗಿರುವ ಅತಿಕ್ರಮಣ ಒತ್ತುವರಿಗಳನ್ನು ಸರ್ವೇ ಇಲಾಖೆಯಿಂದ ಗುರುತಿಸಿಕೊಂಡು, ತೆರವುಗೊಳಿಸಬೇಕು. ಸರ್ವೆ ಹಾಗೂ ಒತ್ತುವರಿ ಕಾರ್ಯಾಚರಣೆಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಪುರಾತತ್ವ ಇಲಾಖೆ, ಕಂದಾಯ ಇಲಾಖೆ, ನಗರ ಭೂಮಾಪನ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net