ಅನಧಿಕೃತ ಹೋಂ ಸ್ಟೇ, ರೆಸಾರ್ಟ್ ತೆರವುಗೊಳಿಸಿ

5 ckm 1 hemanth kumar
ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಆಮ್ ಆದ್ಮಿ ಪಕ್ಷದ ಕಾಫಿ ಬೆಳೆಗಾರರ ಘಟಕದ ರಾಜ್ಯಾಧ್ಯಕ್ಷ ಹೇಮಂತ್ ಕುಮಾರ್ ಮಾತನಾಡಿದರು.
Published on

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅನಧಿಕೃತವಾಗಿರುವ ಹೋಂ ಸ್ಟೇ ಹಾಗೂ ರೆಸಾರ್ಟ್ಗಳನ್ನು ಬಂದ್ ಮಾಡಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಕಾಫಿ ಬೆಳೆಗಾರರ ಘಟಕದ ರಾಜ್ಯಾಧ್ಯಕ್ಷ ಹೇಮಂತ್ ಕುಮಾರ್ ಒತ್ತಾಯಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ಇತ್ತೀಚೆಗೆ ಹೋಂ ಸ್ಟೇ ಹಾಗೂ ರೆಸಾರ್ಟ್ಗಳು ಹೆಚ್ಚಿನ ಸಂಖ್ಯೆಯಲ್ಲಿ ನಿರ್ಮಾಣಗೊಂಡಿವೆ. ಅವುಗಳಲ್ಲಿ ಬಹುತೇಕ ಕಟ್ಟಡಗಳು ಅನಧಿಕೃತವಾಗಿವೆ ಅವುಗಳನ್ನು ಬಂದ್ ಮಾಡಿಸಬೇಕು ಎಂದು ಆಗ್ರಹಿಸಿದರು.
ಅಕ್ರಮ ಕಟ್ಟಡದಿಂದಾಗಿ ಮಣ್ಣು ಕುಸಿಯುವ ಸಾಧ್ಯತೆ ಹೆಚ್ಚಿರುತ್ತದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಅನಾಹುತ ಆಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಈಗಲೇ ಎಚ್ಚೆತ್ತುಕೊಂಡು ಅವುಗಳಿಗೆ ಕಡಿವಾಣ ಹಾಕಬೇಕು. ಚಿಕ್ಕಮಗಳೂರು ಜಿಲ್ಲೆಯಲ್ಲಿ ರಸ್ತೆಗಳು ಕಿರಿದಾಗಿದ್ದು ಮರಗಳ ಕಡಿತಲೆಗೆ ಅನುಮತಿ ಕೊಟ್ಟರೆ ಮರಗಳ ಸಾಗಾಣಿಕೆಯಿಂದ ರಸ್ತೆಗಳು ಹಾಳಾಗಲಿವೆ. ಇದರಿಂದ ಸಾರ್ವಜನಿಕರ ಓಡಾಟಕ್ಕೆ ತುಂಬಾ ತೊಂದರೆಯಾಗುತ್ತದೆ. ಆದ್ದರಿಂದ ಅರಣ್ಯ ಇಲಾಖೆಯವರು ಮಳೆಗಾಲ ಮುಗಿಯವರೆಗೆ ಮರ ಕಡಿತಲೆಗಳಿಗೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿದರು.
ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ಕಾಫಿ ಮತ್ತು ಮೆಣಸು ಬೆಳೆಗಳಿಗೆ ಹಾನಿಯಾಗಿದ್ದು ಶೇ. ೫೦ ರಷ್ಟು ಬೆಳೆಯನ್ನು ಬೆಳೆಗಾರರು ಕಳೆದುಕೊಂಡಿದ್ದಾರೆ. ಆದ್ದರಿಂದ ಜಂಟಿ ಸರ್ವೆ ನಡೆಸಿ ಸೂಕ್ತ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಾರ್ಟಿಯ ಮುಖಂಡರಾದ ಸೈಯದ್ ಜಮಿಲ್ ಅಹಮದ್, ರಂಗನಾಥ್, ಆಂತೋನಿ, ಪ್ರಭು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net