ಕನಕಗಿರಿಯಲ್ಲಿ ಒತ್ತುವರಿ ಅಂಗಡಿಗಳ ತೆರವು

18 KNK 01
ಕನಕಗಿರಿ ಬಸ್ ನಿಲ್ದಾಣ ರಸ್ತೆಯಲ್ಲಿ ಜಾಗ ಒತ್ತುವರಿ ಮಾಡಿಕೊಂಡ ಅಂಡಿಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಯಿತು. ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಸಿಬ್ಬಂದಿ ಯಮನೂರಪ್ಪ, ಜೆಇ ಮಂಜುನಾಥ, , ಟಿಜೆ ವಿಜಯ ಕುಮಾರ್, ಮುಖ್ಯ ಪೇದೆ ಬೈಲಪ್ಪ ಇತರರಿದ್ದರು.
Published on

ಕನಕಗಿರಿ: ಪಟ್ಟಣದಲ್ಲಿ ಶನಿವಾರ ಬೆಳಗ್ಗೆ ಜೆಸಿಬಿಗಳು ಕಾರ್ಯಾಚರಣೆಗೆ ಇಳಿದವು. ವಾಲ್ಮೀಕಿ ವೃತ್ತದಿಂದ ಬಸ್ ನಿಲ್ದಾಣ ರಸ್ತೆ, ತಾವರಗೇರಾ ರಸ್ತೆ, ಗಂಗಾವತಿ ರಸ್ತೆ, ನವಲಿ ರಸ್ತೆಯಲ್ಲಿ ಒತ್ತುವರಿ ಮಾಡಿ ರಸ್ತೆ ಸಂಚಾರಕ್ಕೆ ತೊಂದರೆ ಉಂಟುಮಾಡುತ್ತಿದ್ದ ಗೂಡಂಗಡಿಗಳನ್ನು ಪಪಂನಿಂದ ತೆರವುಗೊಳಿಸಲಾಯಿತು.

ಈ ವೇಳೆ ಪೊಲೀಸ್ ಬಂದೋಬಸ್ತ್‌ನೊಂದಿಗೆ 3 ಜೆಸಿಬಿ ಹಾಗೂ ಸಿಬ್ಬಂದಿಯೊಂದಿಗೆ ಆಗಮಿಸಿದ ಪಟ್ಟಣ ಪಂಚಾಯಿತಿ ಮುಖ್ಯಧಿಕಾರಿ ತೆರವು ಕಾರ್ಯಾಚರಣೆಗೆ ಮುಂದಾದರು. ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಪಪಂ ಮೊದಲ ಸಾಮಾನ್ಯ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಎರಡು ಬಾರಿ ಒತ್ತುವರಿ ಮಾಡಿಕೊಂಡ ಗೂಡಂಗಡಿಗಳ ಮಾಲೀಕರಿಗೆ ತೆರವುಗೊಳಿಸಲು ಸೂಚಿಸಲಾಗತ್ತು. ಸೂಚನೆ ಬಳಿಕವೂ ತೆರವುಗೊಳಿಸಿದ 30 ಅಂಗಡಿಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net