ಸರ್ಕಾರಿ ಜಾಗ ಒತ್ತುವರಿ ತೆರವು

10 HANUR 4
ಲೊಕ್ಕನಹಳ್ಳಿಯಲ್ಲಿ ಸರ್ಕಾರಿ ಜಾಗದ ಒತ್ತುವರಿ ತೆರವುಗೊಳಿಸಲಾಯಿತು. ಮಹದೇವಸ್ವಾಮಿ, ಮಾರುತಿ ಇತರರು ಇದ್ದರು.
Published on

ಹನೂರು: ತಾಲೂಕಿನ ಲೊಕ್ಕನಹಳ್ಳಿಯಲ್ಲಿ ಗುರುವಾರ ಕಂದಾಯ ಇಲಾಖೆಯ ಅಧಿಕಾರಿಗಳು ಸರ್ಕಾರಿ ಜಾಗ ಒತ್ತುವರಿ ತೆರವುಗೊಳಿಸಿದರು.

ಗ್ರಾಮದ ಸರ್ವೇ ನಂ.147ರಲ್ಲಿ ಸರ್ಕಾರಿ ಜಾಗವಿದ್ದು, ಹಳ್ಳ ಹಾದುಹೋಗಿದೆ. ಆದರೆ ಆಸುಪಾಸಿನ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದರು. ಇದರಿಂದ ಈ ಭಾಗದ ರೈತರು ಓಡಾಡಲು ತೊಂದರೆಯಾಗಿತ್ತು. ಒತ್ತುವರಿಯಾಗಿರುವ ಜಾಗವನ್ನು ತೆರವುಗೊಳಿಸುವಂತೆ ಗ್ರಾಮದ ಸುಬ್ರಮಣಿ ಫೆ.2 ರಂದು ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸರ್ವೇ ನಡೆಸಿದ್ದು, ಒತ್ತುವರಿಯಾಗಿರುವುದು ದೃಢವಾಗಿತ್ತು.

ಗುರುವಾರ ಆರ್‌ಐ ಮಹದೇವಸ್ವಾಮಿ, ಗ್ರಾಮ ಆಡಳಿತ ಅಧಿಕಾರಿ ಮಾರುತಿ ಸಮ್ಮುಖದಲ್ಲಿ ಜೆಸಿಬಿ ಯಂತ್ರದ ಮೂಲಕ ಸರ್ಕಾರಿ ಜಾಗ ಒತ್ತುವರಿ ತೆರವುಗೊಳಿಸಲಾಯಿತು. ಇದರಿಂದ ಈ ಭಾಗದ ರೈತರು ನಿಟ್ಟುಸಿರು ಬಿಟ್ಟಂತಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net