ರಾಜ್ಯಾದ್ಯಂತ ಒತ್ತುವರಿ ತೆರವು: ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿಕೆ

news-12-byrathi-basavaraj 1
Published on


ಮೈಸೂರು:
ಯಾವುದೇ ಮುಲಾಜಿಗೆ ಒಳಗಾಗದೆ ರಾಜ್ಯಾದ್ಯಂತ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದರು.


ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆರೆ-ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಪರಿಣಾಮ ಮಳೆ ಬಂದಾಗ ತೀವ್ರ ಸಮಸ್ಯೆಯಾಗುತ್ತಿದೆ. ಸಮಸ್ಯೆ ನಿವಾರಿಸಲು ಬೆಂಗಳೂರು ನಗರ ಮಾತ್ರವಲ್ಲದೆ, ರಾಜ್ಯದ ಉದ್ದಗಲಕ್ಕೂ ಒತ್ತುವರಿ ತೆರವುಗೊಳಿಸಲಾಗುವುದು. ಬಡವ, ಶ್ರೀಮಂತ ಎಂಬ ತಾರತಮ್ಯವಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದರು.


ಇತ್ತೀಚೆಗೆ 11 ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರನ್ನು ಕಾಯಂಗೊಳಿಸಲಾಗಿದೆ. ಹಂತ ಹಂತವಾಗಿ ಇನ್ನುಳಿದ ಗುತ್ತಿಗೆ ಪೌರ ಕಾರ್ಮಿಕರನ್ನು ಕಾಯಂಗೊಳಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net