ಬಟ್ಟೆ ಅಂಗಡಿಗೆ ಬೆಂಕಿ

benki
Published on

ಅಂಕೋಲಾ: ಪಟ್ಟಣದ ಅಂಬಾರಕೊಡ್ಲ ರಸ್ತೆ ತಿರುವಿನ ಸಮೀಪದ ರೆಡಿಮೇಡ್ ಬಟ್ಟೆ ಅಂಗಡಿಯೊಂದಕ್ಕೆ ಭಾನುವಾರ ರಾತ್ರಿ ಬೆಂಕಿ ತಗುಲಿ ಬಟ್ಟೆ, ಪೀಠೋಪಕರಣ ಸುಟ್ಟು ಭಸ್ಮವಾಗಿವೆ.

ಹೊನ್ನೆಕೇರಿಯ ದೀಪಕ ತಾರಾನಾಥ ನಾಯ್ಕ ಅವರ ರಾಯ್ ಫ್ಯಾಶನ್ ಅಂಗಡಿಗೆ ಬೆಂಕಿ ತಗುಲಿದೆ. ಗಣೇಶ ಹಬ್ಬಕ್ಕೆಂದು ಲಕ್ಷಾಂತರ ರೂ.ಮೌಲ್ಯದ ರೆಡಿಮೇಡ್ ಬಟ್ಟೆಗಳನ್ನು ಖರೀದಿಸಿ ಅಂಗಡಿಯಲ್ಲಿ ದಾಸ್ತಾನಿಡಲಾಗಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿರಬಹುದು ಎನ್ನಲಾಗಿದ್ದು, ಸ್ಥಳಕ್ಕೆ ಪಿಎಸ್‌ಐ ಉದ್ದಪ್ಪ ಧರೆಪ್ಪನವರು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕಳೆದ 6 ತಿಂಗಳಲ್ಲಿ ಇದೇ ರಸ್ತೆಯಲ್ಲಿನ ಮೂರು ಅಂಗಡಿಗಳಿಗೆ ಬೆಂಕಿ ತಗುಲಿದಂತಾಗಿದೆ. ಈ ರಸ್ತೆಯ ಕೂಡು ಪ್ರದೇಶದ ವೃತ್ತದಲ್ಲಿ ಒಂದೇ ವಿದ್ಯುತ್ ಕಂಬದಲ್ಲಿ ಹಲವು ಅಂಗಡಿಗಳ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ಇದು ಶಾರ್ಟ್ ಸರ್ಕ್ಯೂಟ್ ಮತ್ತು ಇತರ ಅಗ್ನಿ ಅವಘಡಗಳಿಗೆ ಕಾರಣವಾಗುತ್ತಿದೆ ಎನ್ನುವ ಮಾತು ಸಾರ್ವಜನಿಕರ ವಲಯದಲ್ಲಿ ಕೇಳಿ ಬರುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net