ಸಾಂಸ್ಕೃತಿಕ ಪ್ರತಿಭೆ ಅನಾವರಣಕ್ಕೆ ವೇದಿಕೆ : ಪರಮೇಶ್ವರ ಗೌಡ ಅಭಿಪ್ರಾಯ

New Project (31)
Published on

ಕಡಬ: ಪ್ರತಿ ಮಗುವಿನಲ್ಲೂ ಒಂದಲ್ಲ ಒಂದು ಸಾಂಸ್ಕೃತಿಕ ಪ್ರತಿಭೆ ಅಡಗಿರುತ್ತದೆ. ಆ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮ ಸಹಕಾರಿ. ಎಲ್ಲರ ಸಹಕಾರದಿಂದ ಅರ್ಥಪೂರ್ಣ ಕಾರ್ಯಕ್ರಮವಾಗಿ ಮೂಡಿಬಂದಿದೆ ಎಂದು ಕಾಣಿಯೂರು ಸ.ಹಿ.ಪ್ರಾ.ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್ವರ ಗೌಡ ಅನಿಲ ಹೇಳಿದರು.

ಪುತ್ತೂರು ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರ, ಕಾಣಿಯೂರು ಸಮೂಹ ಸಂಪನ್ಮೂಲ ಕೇಂದ್ರ, ಕಾಣಿಯೂರು ಸ.ಹಿ.ಪ್ರಾ.ಶಾಲೆ ಇದರ ಆಶ್ರಯದಲ್ಲಿ ಕಾಣಿಯೂರು ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಪ್ರತಿಭಾ ಕಿರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾಣಿಯೂರು ಶ್ರೀ ಮಠದ ವ್ಯವಸ್ಥಾಪಕ ಶ್ರೀನಿಧಿ ಆಚಾರ್ಯ ಉದ್ಘಾಟಿಸಿದರು. ಕಾಣಿಯೂರು ಗ್ರಾಮ ಪಂಚಾಯಿತಿ ಸದಸ್ಯ ರಾಮಣ್ಣ ಗೌಡ ಮುಗರಂಜ, ಬೆಳಂದೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಯಂತ ಅಬೀರ, ಕಾಣಿಯೂರು ಕ್ಲಸ್ಟರ್ ಸಿಆರ್‌ಪಿ ಯಶೋದ, ಕಾಣಿಯೂರು ಗ್ರಾಪಂ ಸದಸ್ಯ ವಸಂತ ಪೆರ್ಲೋಡಿ, ಬೆಳಂದೂರು ಗ್ರಾಪಂ ಸದಸ್ಯೆ ಗೌರಿ ಮಾದೋಡಿ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ, ಕಾಣಿಯೂರು ಶ್ರೀ ಮಠದ ಅರ್ಚಕ ಅಜಿತ್ ಆಚಾರ್ಯ, ಕಾಣಿಯೂರು ಶಾಲಾ ಎಸ್‌ಡಿಎಂಸಿ ಉಪಾಧ್ಯಕ್ಷೆ ಯಶೋದ ನೇರೋಳ್ತಡ್ಕ, ಸವಣೂರು ಕ್ಲಸ್ಟರ್ ಸಿಆರ್‌ಪಿ ಜಯಂತ್ ವೈ, ನರಿಮೊಗರು ಕ್ಲಸ್ಟರ್ ಸಿಆರ್‌ಪಿ ಪರಮೇಶ್ವರಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಶಾಲಾ ಪ್ರಭಾರ ಮುಖ್ಯಗುರು ಬಾಲಕೃಷ್ಣ ಕೆ. ಸ್ವಾಗತಿಸಿದರು. ಶಿಕ್ಷಕಿ ವೀಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net