ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ ಜಾರಕಿಹೊಳಿ?

image_editor_output_image-1604631786-1761200939974.jpg
Published on

ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ ಜಾರಕಿಹೊಳಿ?

ಚರ್ಚೆಗೆ ಕಾರವಾದ ಸಿಎಂ ಪುತ್ರನ ಹೇಳಿಕೆ
ಬೆಳಗಾವಿಯಲ್ಲಿ ಮಾತನಾಡಿರುವ ಡಾ.ಯತೀಂದ್ರ ಸಿದ್ದರಾಮಯ್ಯ
ಬೆಳಗಾವಿ: ತಂದೆ ಸಿದ್ದರಾಮಯ್ಯನವರು ರಾಜಕೀಯ ಕೊನೆಗಾಲದಲ್ಲಿದ್ದಾರೆ‌ 2028ರ ನಂತರ ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದಾರೆ. ಹೀಗಾಗಿ ಅವರ ವೈಚಾರಿಕೆ ವಿಚಾರಗಳನ್ನು ಮುಂದುವರಿಸಿಕೊಂಡು ಹೋಗುವ ಎಲ್ಲ ಅರ್ಹತೆ ಸಚಿವ ಸತೀಶ ಜಾರಕಿಹೊಳಿವರಿಗಿದೆ ಎಂದು ಹೇಳಿರುವ ಡಾ.ಯತೀಂದ್ರ ಸಿದ್ದರಾಮಯ್ಯ, ಪರೋಕ್ಷವಾಗಿ ಸಿದ್ದರಾಮಯ್ಯ ಉತ್ತರಾಧಿಕಾರಿ ಜಾರಕಿಹೊಳಿ ಎನ್ನುವ ಸುಳಿವು ಬಿಟ್ಟುಕೊಟ್ಟಿದಗದು ಸದ್ಯ ಇದು ಚರ್ಚೆ ಹುಟ್ಟುಹಾಕಿದೆ.
ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ‌ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ತಂದೆಯವರು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡವರು. ಅದೇ ಸಿದ್ದಾಂತದಲ್ಲಿ ಸತೀಶ್ ಜಾರಕಿಹೊಳಿ‌ಯವರು ನಂಬಿಕೆ ಇಟ್ಟುಕೊಂಡು ಹೋಗ್ತಿದ್ದಾರೆ. 2028ರ ಚುನಾವಣೆಯಲ್ಲಿ ತಂದೆಯವರು ನಿಲ್ಲಲ್ಲ ಅಂದಿದ್ದಾರೆ. ಅವರು ಸದ್ಯ ರಾಜಕೀಯದ ಸಂಧ್ಯಾಕಾಲದಲ್ಲಿದಾರೆ. ಅದು ಆದ ಮೇಲೆ ಜಾತ್ಯಾತೀತ ಕಾಂಗ್ರೆಸ್ ಸಿದ್ದಾಂತ ಇಟ್ಟುಕೊಂಡು ಎಷ್ಟೋ ಜ‌ನ ರಾಜಕಾರಣಿಗಳಿದ್ದಾರೆ. ಅವರೆಲ್ಲರನ್ನ ಸತೀಶ್ ಜಾರಕಿಹೊಳಿ‌ ಮುನ್ನಡೆಸಲಿ. 2028ರ ನಂತರ ಆ ರೀತಿ ಲೀಡ್ ಮಾಡೋರು ಬೇಕು. ಸೈದಾಂತಿಕ ರಾಜಕಾರಣ ಮಾಡುವುದರಲ್ಲಿ ಸತೀಶ್ ಜಾರಕಿಹೊಳಿ‌ ಕೂಡ ಒಬ್ಬರು. ಆ ರೀತಿ ಸಿದ್ದಾಂತ ಇಟ್ಟುಕೊಂಡವರಿಗೆ ಸತೀಶ್ ಜಾರಕಿಹೊಳಿ‌ ಮಾರ್ಗದರ್ಶನ ಮಾಡಲಿ. ಕೊನೆ ದಿನ ಅಂದ್ರೇ ನಾಳೆಯೇ ಕೊನೆಯ ದಿನ ಅಲ್ಲ. 2028 ಗಮನದಲ್ಲಿಟ್ಟುಕೊಂಡು ಹೇಳಿದ್ದೇನೆ ಎಂದಿದ್ದಾರೆ.
ಕಾರ್ಯಕ್ರಮದ ಬಳಿಕ ತಮ್ಮ ಹೇಳಿಕೆ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನಾನು ಮುಂದಿನ ರಾಜಕೀಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ‌ ಎಂಬ ಅರ್ಥದಲ್ಲಿ ಮಾತನಾಡಿಲ್ಲ. ಆದ್ರೇ ಆ ರೀತಿ ಸೈದಾಂತಿಕವಾಗಿ ರಾಜಕಾರಣ ಮಾಡುವವರನ್ನು ಲೀಡ್ ಮಾಡಲಿ ಅನ್ನೋ ಉದ್ದೇಶ ಇಟ್ಟುಕೊಂಡು ಹೇಳಿದ್ದೇನೆ. ನವೆಂಬರ್ ಕ್ರಾಂತಿ ಬರೀ ಊಹಾಪೋಹ. ಯಾವುದೇ ನಾಯಕತ್ವದ ಬದಲಾವಣೆ ಪ್ರಶ್ನೆ ಇಲ್ಲ. ಈ ರೀತಿ ಚರ್ಚೆ ಪಕ್ಷದಲ್ಲಿ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net