ಸಿಎಂ ಕ್ಷಮೆಯಾಚಿಸಿದ ಬೆಲ್ಲದ

3 vikram 4
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಂದಾಲ್​ ಕಂಪನಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವ ವಿಚಾರಕ್ಕಾಗಿ ಮುಖ್ಯಮಂತ್ರಿ ವಿರುದ್ಧ ಆಡಿದ ಮಾತಿಗೆ ವಿಧಾನಸಭೆ ವಿಪಕ್ಷ ನಾಯಕ ಅರವಿಂದ ಬೆಲ್ಲದ ಮುಖ್ಯಮಂತ್ರಿಗೆ ಕ್ಷಮೆಯಾಚಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ಜಿಂದಾಲ್​ಗೆ ಕಡಿಮೆ ದರದಲ್ಲಿ ಭೂಮಿ ಕೊಡಲು ಇದೇನು ನಿಮ್ಮ ಅಪ್ಪನ ಮನೆ ಆಸ್ತಿನಾ ಎಂದು ಹೇಳಿಕೆ ನೀಡಿದ್ದರು. ಆದರೆ ಅದು ಆ ಸಂದರ್ಭದಲ್ಲಿ ಮಾತ್ರ ಬಳಸಿದ್ದು, ಈ ಪದದ ಬಳಕೆಯು ನನಗೆ ಶೋಭೆ ತಂದಿರುವುದಿಲ್ಲ. ಈ ವಿಚಾರವಾಗಿ ಕ್ಷಮೆ ಕೇಳುವುದಾಗಿ ಪತ್ರ ಬರೆದಿದ್ದಾರೆ.
ಆ. 24ರಂದು ಬೆಂಗಳೂರಿನ ಪ್ಯಾಲೇಸ್​ ಮೈದಾನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ, ಜಿಂದಾಲ್​ಗೆ ಕಡಿಮೆ ದರದಲ್ಲಿ ಭೂಮಿ ನೀಡುವುದನ್ನು ವಿರೋಧಿಸುವ ಭರದಲ್ಲಿ ಇದೇನು ಸಿದ್ದರಾಮಯ್ಯನವರ ಅಪ್ಪನ ಆಸ್ತಿನಾ ಎಂದು ಹೇಳಿಕೆ ನೀಡಿದ್ದರು. ಆದರೆ ಈ ಮಾತು ನನಗೂ ಶೋಭೆ ತರುವುದಿಲ್ಲ ಎಂದು ಕ್ಷಮೆಯಾಚಿಸುವ ಮೂಲಕ ತಾವೊಬ್ಬ ಜವಾಬ್ದಾರಿಯುತ ಜನಪ್ರತಿನಿಧಿ ಎಂಬುದನ್ನು ಸಾಬೀತುಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net