

ಬೆಂಗಳೂರು: ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿ ವಿಶ್ರಾಂತಿಯಲ್ಲಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರದಿಂದ ಕಚೇರಿ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ. ಅವರು ನಾಳೆ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲೂ ಭಾಗಿಯಾಗುತ್ತಾರೆ ಎಂದು ಅಧಿಕೃತ ಮೂಲಗಳು ಖಚಿತಪಡಿಸಿವೆ.
ದೇಶದ 74ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ನಾಳೆ ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ನಡೆಯಲಿದೆ. ಇದರಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾಗವಹಿಸಲಿದ್ದಾರೆ. ಅವರು ಬೆಳಗ್ಗೆ 8.45ಕ್ಕೆ ಮನೆಯಿಂದ ಹೊರಡಲಿದ್ದು, 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಇನ್ನುಳಿದಂತೆ ಮುಖ್ಯಮಂತ್ರಿಯವರ ದಿನದ ಕಾರ್ಯಕ್ರಮ ಪಟ್ಟಿಯಲ್ಲಿ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಲ್ಲ.