ಕನ್ನಡ ಚಿತ್ರರಂಗಕ್ಕೆ ಬಂಪರ್ ಆಫರ್; ಬಜೆಟ್​​ಗೂ ಮುನ್ನ ಸಿಎಂ ಹೇಳಿದ್ದೇನು?

cm djsgfu
Published on

ಬೆಂಗಳೂರು: ಕನ್ನಡ ಚಿತ್ರ ರಂಗದ ಹೆಸರಾಂತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಹುಟ್ಟೂರು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಣಗಾಲ್ ನಲ್ಲಿ ಶಿಥಿಲಾವಸ್ಥೆಯಲ್ಲಿ ಇರುವ ಅವರ ಮನೆಯನ್ನು ಸ್ಮಾರಕವಾಗಿ ರೂಪಿಸಲು ಹಾಗೂ ಬೆಂಗಳೂರಿನ ನಂದಿನಿ ಬಡಾವಣೆಯಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿ ಸ್ವಾಮ್ಯದ ಕನ್ನಡ ಚಲನಚಿತ್ರ ಅಮೃತೋತ್ಸವ ಭವನದಲ್ಲಿ ಚಿತ್ರ ಮಂದಿರವನ್ನು ನಿರ್ಮಿಸಲು ಎಲ್ಲಾ ರೀತಿಯ ನೆರವು ಒದಗಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.

13ನೇ ಬೆಂಗಳೂರು ಅಂತರ್​ರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಹಿಂದೆ ಇಂತಹ ಚಲನ ಚಿತ್ರೋತ್ಸವಗಳನ್ನು ಆಯೋಜಿಸಲು ಹಲವು ತಿಂಗಳುಗಳೇ ಬೇಕಾಗುತ್ತಿದ್ದವು. ಆದರೆ, ತಂತ್ರಜ್ಞಾನ ಬೆಳೆದಿರುವ ಸಂದರ್ಭದಲ್ಲಿ ಅತ್ಯಲ್ಪ ಅವಧಿಯಲ್ಲಿ ಚಲನಚಿತ್ರೋತ್ಸವಗಳನ್ನು ಆಯೋಜಿಸಬಹುದಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಕನ್ನಡದ ಮೊಟ್ಟ ಮೊದಲ ವಾಕ್ ಚಿತ್ರ ಸತಿ ಸುಲೋಚನ 1934 ರ ಮಾರ್ಚ್ 3 ರಂದು ತೆರೆಕಂಡ ಸಂಸ್ಮರಣೆಯಲ್ಲಿ ಮಾರ್ಚ್ 3 ರನ್ನು ವಿಶ್ವ ಕನ್ನಡ ಚಲನಚಿತ್ರ ದಿನ ಎಂದು ಘೋಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇನ್ನು ಮುಂದೆ ಪ್ರತಿ ವರ್ಷ ಇದೇ ದಿನದಂದು ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಪ್ರಾರಂಭಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net