

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ "ಮುಖ್ಯಮಂತ್ರಿ ರೈತ ವಿದ್ಯಾನಿಧಿ" ಯೋಜನೆಗೆ ಚಾಲನೆ ನೀಡಿದರು.
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಖಾತೆಗೆ ನೇರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದರು.
ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ವಿದ್ಯಾರ್ಥಿ ವೇತನ ವಿತರಿಸಿದರು. ಕೃಷಿ ಸಚಿವ ಬಿ.ಸಿ. ಪಾಟೀಲ, ಸಚಿವ ಸಂಪುಟದ ಇತರ ಸದಸ್ಯರಾದ ಪ್ರಭು ಚೌವ್ಹಾಣ್, ಎನ್. ಮುನಿರತ್ನ, ಬಿ.ಸಿ. ನಾಗೇಶ್, ಸಾವಯವ ಕೃಷಿ ಕುರಿತ ಉನ್ನತಾಧಿಕಾರ ಸಮಿತಿ ಅಧ್ಯಕ್ಷ ಎ.ಎಸ್. ಆನಂದ್, ಸಂಸದರು, ಶಾಸಕರು ಸಮಾರಂಭದಲ್ಲಿ ಭಾಗವಹಿಸಿದ್ದರು.