ನಾಳೆ ಕುದ್ರೋಳಿಗೆ ಸಿಎಂ ಬೊಮ್ಮಾಯಿ ಭೇಟಿ

bommayi
Published on

ಮಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅಕ್ಟೋಬರ್‌ 13ರಂದು (ಬುಧವಾರ) ಉಡುಪಿ ಜಿಲ್ಲೆಗೆ ಆಗಮಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರವಾಸ ಕಾರ್ಯಕ್ರಮದಲ್ಲಿ ತುಸು ಬದಲಾವಣೆ ಮಾಡಲಾಗಿದೆ. ಪರಿಷ್ಕೃತ ಪ್ರವಾಸ ಕಾರ್ಯಕ್ರಮದಂತೆ ಉಡುಪಿಯಿಂದ ಸಾಯಂಕಾಲ ಮಂಗಳೂರಿಗೆ ಆಗಮಿಸಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಸಾಯಂಕಾಲ 5 ಗಂಟೆಗೆ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡುವ ಅವರು, ನವರಾತ್ರಿ ಉತ್ಸವ ಮಂಗಳೂರು ದಸರಾ ಆಚರಣೆ ಹಿನ್ನೆಲೆಯಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. 6.55ಕ್ಕೆ ವಿಮಾನ ದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net