ಕಳಸಾ ಬಂಡೂರಿ ಯೋಜನೆಗೆ ಡಿಪಿಆರ್ ಸಿದ್ಧ

FB_IMG_1680009995258.jpg
Published on


ಬೆಳಗಾವಿ:ಕಳಸಾ ಬಂಡೂರಿ ಯೋಜನೆಗೆ ಡಿಪಿಆರ್ ಸಿದ್ಧವಾಗಿದೆ. ಟೆಂಡರ್ ಕರೆಯಲಾಗಿದ್ದು. ಮುಂದಿನ ದಿನಗಳಲ್ಲಿ ನಾವೇ ಚಾಲನೆ ನೀಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುವರ್ಣ ವಿಧಾನಸೌಧದ  ಆವರಣದಲ್ಲಿ ಆಯೋಜಿಸಿರುವ  ವೀರ ಮಹಿಳೆ ಕಿತ್ತೂರು ರಾಣಿ ಚನ್ನಮ್ಮ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ  ಸಂವಿಧಾನ ಶಿಲ್ಪಿ ಬಾಬಾ ಸಾಹೇಬ ಡಾ : ಬಿ.ಆರ್. ಅಂಬೇಡ್ಕರ್ ಅವರ  ಪ್ರತಿಮೆಗಳನ್ನು ಅನಾವರಣಗೊಳಿಸಿ ಮಾತನಾಡಿದರು.
ಈ ಭಾಗದ ನೀರಾವರಿಗೆ ಅತಿ ಹೆಚ್ವು ಪ್ರಾಮುಖ್ಯತೆ ನೀಡಿದೆ. ಕೃಷ್ಣಾ ಮೇಲ್ದಂಡೆಯ ಮೂರನೇ ಹಂತ, ನೆನೆಗುದಿಗೆ ಬಿದ್ದ ಯೋಜನೆಗಳನ್ನು ಪೂರ್ಣ ಮಾಡಿದೆ. ರೈತರಿಗೆ ಏಕರೂಪ ದರವನ್ನು ನೀಡಲು ಕಳೆದ 7-8  ವರ್ಷಗಳಿಂದ ಪ್ರಯತ್ನ ಮಾಡಲಾಗಿತ್ತು. ನಮ್ಮ ಸರ್ಕಾರ ನಿರ್ಣಯ ಮಾಡಿ ಚೆಕ್ ವಿತರಣೆ ಮಾಡಲಾಗುತ್ತಿದೆ ಎಂದರು.
ಕಿತ್ತೂರು -ಧಾರವಾಡ ನಡುವೆ 300 ಎಕರೆ ಪ್ರದೇಶದಲ್ಲಿ ಎಫ್.ಎಂ.ಸಿ.ಜಿ ಗೆ ಚಾಲನೆ ನೀಡಿದ್ದು, ಸುಮಾರು ಒಂದು ಲಕ್ಷ ಜನರಿಗೆ ಉದ್ಯೋಗ ಲಭಿಸಲಿದೆ.  ವಿಶೇಷ ಹೂಡಿಕೆ ಪ್ರದೇಶ ಸ್ಥಾಪನೆ, ಧಾರವಾಡಕ್ಕೆ ಜಯದೇವ ಆಸ್ಪತ್ರೆ, ಬೆಳಗಾವಿಗೆ ಕಿದ್ವಾಯಿ ಆಸ್ಪತ್ರೆ , ಸ್ಥಾಪಿಸಲಾಗಿದೆ. ಬರುವ ದಿನಗಳಲ್ಲಿ ಕಿತ್ತೂರು ಕರ್ನಾಟಕ ಅಭಿವೃದ್ಧಿಯಾದರೆ ಸಮಗ್ರ ಕರ್ನಾಟಕ ಅಭಿವೃದ್ಧಿ ಯಾಗಿ, ಭಾರತದ ಅಭಿವೃದ್ಧಿ ಯಾಗುತ್ತದೆ.
ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಕೊಡುಗೆ*
2025 ಕ್ಕೆ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆ  ಕೊಡುಗೆ ನೀಡಲು ಸಿದ್ಧತೆ ಮಾಡಲಾಗಿದೆ. ಒಂದೂವರೆ ವರ್ಷದಲ್ಲಿ ರೈತರು, ಮಹಿಳೆಯರು, ಯುವಕರು, ದೀನದಲಿತರಿಗೆ  ಡಿಬಿಟಿ ಮೂಲಕ ಸೌಲಭ್ಯ ವಿತರಣೆ ಮಾಡಲಾಗಿದೆ. ಶಿಕ್ಷಣ ಮತ್ತು ಆರೋಗ್ಯಕ್ಕೆ ಅತಿ ಹೆಚ್ಚು ಹಣವನ್ನು ನೀಡಲಾಗಿದೆ. ಸಮಗ್ರ ಕರ್ನಾಟಕದ ಕಲ್ಪನೆಯಲ್ಲಿ ಕಾರ್ಯೋನ್ಮುಖವಾಗಿದ್ದೇವೆ ಎಂದರು.  ಕರ್ನಾಟಕದ ಅಭಿವೃದ್ಧಿ ಜನತೆಯ ದುಡಿಮೆಯಿಂದ ಆಗಿದೆ. ದುಡಿಯುವ ವರ್ಗಕ್ಕೆ ಹೆಚ್ಚಿನ ಬಳ ತಿಂಬುವ ಕೆಲಸ ಮಾಡಲಾಗುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net