ಬುಧವಾರ ಕೆಆರ್​​ಎಸ್​ ಡ್ಯಾಂಗೆ ಬಾಗಿನ ಅರ್ಪಣೆ: 10 ತಿಂಗಳಲ್ಲಿ 2ನೇ ಬಾರಿ ಸಿಎಂ ಬೊಮ್ಮಾಯಿ ಅವರಿಗೆ ಅವಕಾಶ

KRSbagina
Published on

ಮಂಡ್ಯ: ಜೀವನಾಡಿ ಕೃಷ್ಣರಾಜಸಾಗರ ಅಣೆಕಟ್ಟೆಗೆ ಜು.20ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಾಗಿನ ಅರ್ಪಿಸಲಿದ್ದಾರೆ. ಅಂತೆಯೇ ಇತಿಹಾಸದಲ್ಲಿ ಮೊದಲ ಬಾರಿಗೆ ಹತ್ತು ತಿಂಗಳ ಅವಧಿಯಲ್ಲಿ ಸಿಎಂ ಒಬ್ಬರಿಗೆ ಎರಡು ಬಾರಿ ಬಾಗಿನ ಅರ್ಪಿಸುವ ಅವಕಾಶ ಸಿಕ್ಕಿರುವುದು ವಿಶೇಷ.

ಇನ್ನು ಕೋವಿಡ್ ವೈರಸ್ ಹರಡುವ ಆತಂಕದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ. ಅದರಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿ ಕಡಿಮೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮತ್ತು ಕೋವಿಡ್ ನಿಯಮ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಇದೇ 20ರಂದು ಬೆಳಗ್ಗೆ 8.30ಕ್ಕೆ ಮೈಸೂರಿಗೆ ಆಗಮಿಸುವ ಸಿಎಂ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸುವರು. ನಂತರ 11ಕ್ಕೆ ಎಚ್.ಡಿ.ಕೋಟೆಯಲ್ಲಿರುವ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸುವರು.

ಬಳಿಕ ನೇರವಾಗಿ ಕೆಆರ್​​ಎಸ್ ಆಗಮಿಸುವ ಸಿಎಂ ಮಧ್ಯಾಹ್ನ 12.10ಕ್ಕೆ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಜಲಾಶಯಕ್ಕೆ ಬಾಗಿನ ಅರ್ಪಿಸುವರು. ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳೆದ ವರ್ಷ ಅ.28ರಂದು ಬಾಗಿನ ಅರ್ಪಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net