ಸಿಎಂ ಬೊಮ್ಮಾಯಿ‌, ಮಾಜಿ ಸಿಎಂ ಬಿಎಸ್​ವೈ ಇಂದು ದೆಹಲಿಗೆ ದೌಡು

Bommai BSY
Published on

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಧ್ಯಾಹ್ನ ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ರಾತ್ರಿಯೇ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಮೂಲಗಳ ಪ್ರಕಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಮನೆಯಲ್ಲಿ ನಡೆಯಲಿರುವ ಶುಭ ಕಾರ್ಯದಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿದ್ದು, ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿ ಕೆಲವು ಹಿರಿಯ ನಾಯಕರೊಂದಿಗೆ ಅನೌಪಚಾರಿಕ ಮಾತುಕತೆ ನಡೆಸುವ ಸಾಧ್ಯತೆಗಳಿವೆ.

ಅಲ್ಲದೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ, ಭದ್ರಾ ಮೇಲ್ದಂಡೆ ಯೋಜನೆಗೆ ವಿಶೇಷ ಅನುದಾನ, ರೈಲ್ವೆ ಸವಲತ್ತುಗಳ ಸುಧಾರಣೆಗೆ ರಾಜ್ಯಕ್ಕೆ ಹೆಚ್ಚಿನ ನೆರವು ನೀಡಿದ್ದಕ್ಕೆ ಧನ್ಯವಾದಗಳನ್ನು ಸಲ್ಲಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ರಾಜ್ಯಕ್ಕೆ ಆಗಮಿಸಿ, ಮೂರು ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಕಾರಣ ಸಿಎಂ ಬೊಮ್ಮಾಯಿ‌, ಮಾಜಿ ಸಿಎಂ ಬಿಎಸ್​ವೈ ಭಾನುವಾರ ರಾತ್ರಿಯೇ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net