

ಬೆಂಗಳೂರು: ರಾಜ್ಯದ ಗಡಿಜಿಲ್ಲೆ ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ಭೇಟಿ ಸಲ್ಲದು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕ್ರಮಕೈಗೊಳ್ಖಬೇಕಾಗುತ್ತದೆ ಎಂದು ಮಹಾ ಸರ್ಕಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾಕೀತು ಮಾಡಿದರು.
ಸುದ್ದಿಗಾರರಿಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ಸಚಿವರ ಭೇಟಿ ಸರಿಯಲ್ಲವೆಂದು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಸಲಹೆ ನೀಡಬಯಸುವೆ. ಸಚಿವರ ಭೇಟಿಯು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗೆ ಕಾರಣವಾಗಲಿದ್ದು, ಮುನ್ನೆಚ್ಚರಿಕೆ ಕ್ರಮ ಅನಿವಾರ್ಯವಾಗಲಿದೆ ಎಂದರು.
ಗಡಿ ವಿವಾದ ಮುಗಿದ ಅಧ್ಯಾಯವಾಗಿದ್ದು, ಈ ವಿಷಯದಲ್ಲಿ ಕರ್ನಾಟಕದ ನಿಲುವು ದೃಢವಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
a