ಸಿಎಂ ಆಗಿ ಮೊದಲ ಬಜೆಟ್​ ಮಂಡನೆ: ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ

Bommai
Published on

ಬೆಂಗಳೂರು: ಇಂದು ರಾಜ್ಯ ಬಜೆಟ್​ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಸಿಎಂ ಬೊಮ್ಮಾಯಿ ಇಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಬಜೆಟ್​ ಮಂಡನೆ ಆರಂಭವಾಗಲಿದೆ. ಸಮಸ್ತ ಕರ್ನಾಟಕದ ಜನತೆ ಹೆಸರಿನಲ್ಲಿ ಸಿಎಂ ಬೊಮ್ಮಾಯಿ ಅರ್ಚನೆ ಮಾಡಿಸಿದ್ದಾರೆ.

ರಾಜ್ಯದ ಜನತೆಗೆ ಸುಖ ಶಾಂತಿ ನೆಮ್ಮದಿಯನ್ನು ಕರುಣಿಸಲೆಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದಾದ ಬಳಿಕ ಬಾಲಬ್ರೂಯಿ ವಸತಿಗೃಹದ ಪಕ್ಕದಲ್ಲಿರುವ ಆಂಜನೇಯ ಸ್ವಾಮಿ‌ ದೇವಸ್ಥಾನಕ್ಕೆ ಭೇಟಿ ನೀಡಿ ಸಿಎಂ ಬೊಮ್ಮಾಯಿ, ಅರ್ಚನೆ ಹಾಗೂ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಸಿ ಸಿ ಪಾಟೀಲ್, ಬೈರತಿ ಬಸವರಾಜ ಹಾಗೂ ಶಾಸಕ‌ರಾದ ಬಿ ಜಿ ಪಾಟೀಲ್ ಸಾಥ್​ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net