ಸಿಎಂ ಬೊಮ್ಮಾಯಿ ಜಿಲ್ಲಾ ಪ್ರವಾಸ ಏ.24ರಂದು

_DSC5997
Published on

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏ.24ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧೆಡೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11.30ಕ್ಕೆ ರಾಣೆಬೆನ್ನೂರ ಬಿಜೆಪಿ ಅಣ್ಯರ್ಥಿ ಅರುಣಕುಮಾರ ಪೂಜಾರ ಪರವಾಗಿ ರೋಡ್ ಶೋ ಹಾಗೂ ಸಾರ್ವಜನಿಕರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಹಾವೇರಿ ಅಭ್ಯರ್ಥಿ ಗವಿಸಿದ್ದಪ್ಪ ದ್ಯಾಮಣ್ಣವರ ಪರವಾಗಿ ಹಾವೇರಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಶಿಗ್ಗಾಂವಿ ತಾಲೂಕು ಬಂಕಾಪುರದ ಉಡಚಮ್ಮ ದೇಗುಲದಿಂದ ಬಸ್ ನಿಲ್ದಾಣದವರೆಗೆ ರೋಡ್ ಶೋ ನಂತರ ಸಾರ್ವಜನಿಕರ ಸಭೆ ಮೂಲಕ ಚುನಾವಣೆ ಪ್ರಚಾರ ನಡೆಸಲಿದ್ದಾರೆ. ಸಂಜೆ 4.30ಕ್ಕೆ ಸವಣೂರಿನ ಮೈಲಾರಲಿಂಗ ದೇವಸ್ಥಾನದಿಂದ ರೋಡ್ ಶೋ ನಡೆಸಿ ಬುಧವಾರಪೇಟ ವೃತ್ತದಲ್ಲಿ ಸಭೆ ನಡೆಸಲಿದ್ದಾರೆ. ನಂತರ ಕುಂದಗೋಳದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಹಾವೇರಿಯಲ್ಲಿ ಸಿಎಂ ರೋಡ್ ಶೋ
ಹಾವೇರಿ: ಹಾವೇರಿ ಎಸ್.ಸಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗವಿಸಿದ್ದಪ್ಪ ದ್ಯಾಮಣ್ಣವರ ಪರವಾಗಿ ಏ.24ರಂದು ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೋಡ್ ಶೋ ನಡೆಸಲಿದ್ದಾರೆ.
ಪುರ ಸಿದ್ದೇಶ್ವರ ದೇವಸ್ಥಾನದಿಂದ ಎಂ.ಜಿ.ರಸ್ತೆ, ಜೆ.ಪಿ. ವೃತ್ತದ ಮಾರ್ಗವಾಗಿ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net