ಸಿಎಂ ಬೊಮ್ಮಾಯಿಗೆ ಸನ್ಮಾನ ಭಾನುವಾರ

15-04-Shiva-1
Published on

ರಾಯಚೂರು: ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸ್ಥಳೀಯ ಕೃಷಿ ವಿಜ್ಞಾನಗಳ ವಿವಿ ಮೈದಾನದಲ್ಲಿ ಪರಿಶಿಷ್ಟ ಜಾತಿಗಳ ಒಕ್ಕೂಟದಿಂದ ಭಾನುವಾರ ಸನ್ಮಾನಿಸಲಾಗುತ್ತಿದೆ. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಸಚಿವ ಗೋವಿಂದ ಕಾರಜೋಳ, ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಪಾಲ್ಗೊಳ್ಳಲಿದ್ದಾರೆ. ಸಮಾರಂಭಕ್ಕಾಗಿ ವಿವಿ ಮೈದಾನದಲ್ಲಿ ವೇದಿಕೆ ನಿರ್ಮಾಣ ಮಾಡಲಾಗುತ್ತಿದ್ದು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ ಮತ್ತು ಶಾಸಕ ಡಾ.ಶಿವರಾಜ ಪಾಟೀಲ್ ಶನಿವಾರ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದನಾ ಕಾರ್ಯಕ್ರಮಕ್ಕಾಗಿ ಕೃಷಿ ವಿಜ್ಞಾನಗಳ ವಿವಿ ಆವರಣದಲ್ಲಿನ ಹಲವು ಮರಗಳ ರೆಂಬೆಗಳನ್ನು ಕಡಿದು ಹಾಕಲಾಗಿದೆ. ಇದಕ್ಕೆ ಪರಿಸರ ಪ್ರೇಮಿಗಳಿಂದ ವಿರೋಧ ವ್ಯಕ್ತವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net