'ಥ್ಯಾಂಕ್ಯು ಮೋದಿಜೀ'...ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ

pic bommayi
Published on

ಬೆಂಗಳೂರು: ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದರು. ಇದಕ್ಕೆ ಪ್ರತಿಯಾಗಿ ಸಿಎಂ ಬೊಮ್ಮಾಯಿ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ.

'ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಧನ್ಯವಾದಗಳು. ಬಿಎಸ್​ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಮಾಡಿದ ಒಳ್ಳೆ ಕೆಲಸ-ಕಾರ್ಯಗಳನ್ನು ನಾನು ಸಹ ಖಂಡಿತವಾಗಿ ಮುಂದುವರೆಸುತ್ತೇನೆ.

ಪಕ್ಷದ ಹಿರಿಯ ನಾಯಕರ ಮಾರ್ಗಸೂಚಿಯಲ್ಲಿ, ರಾಜ್ಯ ಮತ್ತು ದೇಶವನ್ನು ಅಭಿವೃದ್ಧಿಯೆಡೆಗೆ ಸಾಗಿಸಲು ನಾನು ಮತ್ತು ನಮ್ಮ ತಂಡ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net