

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮನ್ನು ರಾಜಕೀಯ ಕಾರಣಕ್ಕಾಗಿ ಭೇಟಿ ಮಾಡಿದ್ದಲ್ಲ. ದಾಸರಹಳ್ಳಿ ಕ್ಷೇತ್ರದಲ್ಲಿ ಮಳೆಯಿಂದ ಹಾನಿಯಾಗಿದ್ದು, ಹೆಚ್ಚಿನ ನೆರವು ನೀಡಬೇಕು ಎಂದು ಕೇಳಲು ಬಂದಿದ್ದರು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿವರಣೆ ನೀಡಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆ ತನಿಖೆ ವಿಷಯದಲ್ಲಿ ಮುಕ್ತ ಅವಕಾಶ ನೀಡಿದ್ದು, ಯಾವುದೇ ಒತ್ತಡ, ಹಸ್ತಕ್ಷೇಪದ ಪ್ರಶ್ನೆಯೇ ಉದ್ಭವಿಸದು ಎಂದರು.
ಪ್ರವಾಹ ಪರಿಹಾರ ಕಾರ್ಯಕ್ಕೆ ಅಧಿಕ ನೆರವು ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚಿಸುವುದಕ್ಕಾಗಿ ಇಷ್ಟರಲ್ಲೇ ದೆಹಲಿಗೆ ಭೇಟಿ ನೀಡುವೆ ಎಂದು ತಿಳಿಸಿದರು.