ಸಿಎಂ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್​!

Vidhana Soudha vvani
Published on

ಮೈಸೂರು: ಬಿ.ಎಸ್​. ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್​ ಆಗಿದ್ದು, ಸಚಿವ ಸ್ಥಾನಕ್ಕಾಗಿ ಚಾತಕಪಕ್ಷಿಗಳಂತೆ ಕಾಯುತ್ತಿದ್ದವರ ಮೊಗದಲ್ಲೀಗ ಮಂದಹಾಸ ಮೂಡಿದೆ.

ಇದೇ ತಿಂಗಳ(ಜನವರಿ) 13 ಅಥವಾ 14ರಂದು ಸಚಿವ ಸಂಪುಟ ವಿಸ್ತರಣೆ ಆಗಲಿದೆ. 13ರಂದು ಅಮಾವಾಸ್ಯೆ ಇದೆ. ಅಂದು ಸಂಜೆ 4 ಗಂಟೆ ಬಳಿಕ ಅಮಾವಾಸ್ಯೆ ಇರುವುದಿಲ್ಲ. ಇದೆಲ್ಲವನ್ನು ನೋಡಿಕೊಂಡೇ ತೀರ್ಮಾನ ಮಾಡಲಾಗಿದೆ‌ ಎಂದು ಸುತ್ತೂರಿನಲ್ಲಿ ಸೋಮವಾರ ಬೆಳಗ್ಗೆ ಯಡಿಯೂರಪ್ಪ ಹೇಳಿದರು. ಇದನ್ನೂ ಓದಿರಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​ ದಾಖಲು

ಇದನ್ನೂ ಮುನ್ನಾ ಮಾಜಿ ಪ್ರಧಾನಿ ಲಾಲ್ ಬಹಾದುರ್ ಶಾಸ್ತ್ರಿ ಅವರ‌ 54ನೇ ಪುಣ್ಯತಿಥಿ ನಿಮಿತ್ತ ವಿಧಾನಸೌಧದ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಸಿಎಂ, ಖಾಲಿಯಿರುವ 7 ಸ್ಥಾನಗಳನ್ನು ತುಂಬುವುದು ಖಚಿತ. ಬುಧವಾರ ಇಲ್ಲವೇ ಗುರುವಾರ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂದಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೂ ಆಹ್ವಾನಿಸಿದ್ದು, ಅವರ ಅನುಕೂಲತೆ ನೋಡಿಕೊಂಡು ದಿನಾಂಕ ಹಾಗೂ ಸಮಯ‌ ನಿಗದಿ ಮಾಡಲಾಗುವುದು ಎಂದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net