VIDEO: ಮಹೇಂದ್ರ ಕುಮಾರ್ ನಿಧನದ ಬಗ್ಗೆ ಸಿಎಂ ಬಿಎಸ್​ವೈ ಪ್ರತಿಕ್ರಿಯೆ ಹೀಗಿತ್ತು...: ಮಹೇಂದ್ರ ಅವರು ನಿನ್ನೆ ಯೂಟ್ಯೂಬ್​ಗೆ ಅಪ್ಲೋಡ್ ಮಾಡಿದ ವಿಡಿಯೋ ಕೂಡ ಬಿಎಸ್​ವೈ ಕುರಿತೇ ಆಗಿತ್ತು...

cm bsy reacts about mahendra kumar death 25 APR 20
Published on

ಬೆಂಗಳೂರು: ಬಜರಂಗ ದಳದ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ಅವರು ಹೃದಯಾಘಾತಕ್ಕೆ ಒಳಗಾಗಿ ಶನಿವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿ ಟ್ವೀಟ್ ಕೂಡ ಮಾಡಿದ್ದಾರೆ.

ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ಅವರ ಅಗಲಿಕೆ ನೋವು ತಂದಿದೆ. ಬಜರಂಗದಳದ ಮಾಜಿ ಸಂಚಾಲಕರಾಗಿದ್ದ ಮಹೇಂದ್ರ ಕುಮಾರ್ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಹಿತೈಷಿಗಳಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬಿಎಸ್​ವೈ ಪ್ರತಿಕ್ರಿಯಿಸಿದ್ದಾರೆ.

ಕರೊನಾ ತಡೆಯುವ ಹೋರಾಟ ಈ ಸಂದರ್ಭದಲ್ಲಿ ಸಿಎಂ ಬಿಎಸ್​ವೈ ಅವರ ನಿರ್ಣಯಗಳನ್ನು ಟೀಕಿಸುವ ಕೆಲಸ ಆಗುತ್ತಿದ್ದ ಬಗ್ಗೆ ಮಹೇಂದ್ರ ಕುಮಾರ್ ಅವರು ಬೇಸರ ವ್ಯಕ್ತಪಡಿಸಿದ್ದರು. ಅಲ್ಲದೆ, ಈಗಿನ ಸನ್ನಿವೇಶದಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರ ವರ್ತನೆಯನ್ನೂ ಮಹೇಂದ್ರ ಕುಮಾರ್​ ತಮ್ಮ ಯೂಟ್ಯೂಬ್ ಚಾನೆಲ್ ಮೂಲಕ ಟೀಕಿಸಿದ್ದರು. ಈ ಕಾರ್ಯಕ್ರಮದ ವಿಡಿಯೋ ನಿನ್ನೆ ಅಪ್ಲೋಡ್​ ಆಗಿದ್ದು, ಇದು ಅವರ ಕೊನೆಯ ಕಾರ್ಯಕ್ರಮವಾಗಿ ಹೋಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net