ಸುರೇಶ್​ ಅಂಗಡಿ ಸ್ಮಾರಕ ನಿರ್ಮಾಣ ಬೆಳಗಾವಿಯಲ್ಲೋ, ದೆಹಲಿಯಲ್ಲೋ?

bsy-suresh angadi
Published on

ಬೆಳಗಾವಿ: ಕೇಂದ್ರ ಸಚಿವ ದಿ. ಸುರೇಶ್​ ಅಂಗಡಿ ನಿವಾಸಕ್ಕೆ ತೆರಳಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿರುವ ಅಂಗಡಿ ನಿವಾಸಕ್ಕೆ ಬುಧವಾರ ಬೆಳಗ್ಗೆ ಭೇಟಿ ನೀಡಿದ್ದ ಬಿಎಸ್​ವೈ ಅವರು ಸುರೇಶ್​ ಅಂಗಡಿ ಪತ್ನಿ ಮಂಗಳಾ, ತಾಯಿ ಸೋಮವ್ವ, ಮಕ್ಕಳಾದ ಸ್ಪರ್ಧಾ, ಸ್ಫೂರ್ತಿ ಸೇರಿದಂತೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸುರೇಶ್​ ಅಂಗಡಿ ಅಂತ್ಯಕ್ರಿಯೆ ನಡೆದ ದೆಹಲಿಯಲ್ಲಿ ಅವರ ಸಮಾಧಿ ಸ್ಥಳ ಅಭಿವೃದ್ಧಿ ಪಡಿಸಿ ಅಲ್ಲಿಯೇ ಸ್ಮಾರಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಸುರೇಶ್​ ಅಂಗಡಿ ಸ್ಮಾರಕವನ್ನು ಬೆಳಗಾವಿಯಲ್ಲೇ ನಿರ್ಮಿಸುವಂತೆ ಅವರ ಅಭಿಮಾನಿಗಳು ಒತ್ತಾಯ ಮಾಡಿರುವುದು ಗಮನಕ್ಕಿದೆ. ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಹೇಳಿದರು.

ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಹಾಗೂ ಸಚಿವ ಜಗದೀಶ ಶೆಟ್ಟರ್, ಶಾಸಕ ಅನಿಲ್ ಬೆನಕೆ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net