ವಿಜಯವಾಣಿ ಸುದ್ದಿಜಾಲ ಕಲಬುರಗಿ
ವಸತಿ ಯೋಜನೆ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಕುರಿತು ಕಳೆದ ಎರಡ್ಮೂರು ದಿನಗಳಿಂದ ಒಂದೊAದಾಗಿ ಬಾಂಬ್ ಸಿಡಿಸುತ್ತಿರುವ ಯೋಜನಾ ಆಯೋಗದ ಉಪಾಧ್ಯಕ್ಷರಾದ ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರೊಂದಿಗೆ ಭಾನುವಾರ ಸಂಜೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ಮಾಡಿ ಮಾತನಾಡಿದ್ದಾರೆ. ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ಮುಜುಗರವಾಗುತ್ತದೆ ಹೀಗೆಲ್ಲ ಮಾತನಾಡಬೇಡಿ ಎಂದು ತಿಳಿ ಹೇಳಿ ಸಮಾಧಾನಪಡಿಸಿದ್ದಾರೆ ಎಂದು ಮೂಲಗಳು ವಿಜಯವಾಣಿಗೆ ತಿಳಿಸಿವೆ.
ಜೂನ್ ೨೫ ರಂದು ಬೆಂಗಳೂರಿಗೆ ಬನ್ನಿರಿ, ಕುಳಿತು ಮಾತನಾಡೋಣ ಎಂದು ಸಿಎಂ ತಿಳಿಸಿದ್ದಾರೆ. ಅಂದು ಸಂಜೆ ಸಮಯ ನಿಗದಿಪಡಿಸಿದ್ದಾರೆ. ಬೆಂಗಳೂರಿಗೆ ಬರುವವರೆಗೂ ಮಾಧ್ಯಮದವರ ಮುಂದೆ ಏನು ಮಾತನಾಡಿ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ ಎಂದು ಗೊತ್ತಾಗಿದೆ.