ಸಿಎಂ ಬದಲಾವಣೆ ವಿಷಯವನ್ನೇ ಕೈಬಿಡಿ - ರಮೇಶ ಜಾರಕಿಹೊಳಿ

RAMESH JARKIHOLI
Published on

ಬೆಳಗಾವಿ: ಸಿಎಂ ಬಿ.ಎಸ್.ಯಡಿಯೂರಪ್ಪ ಬದಲಾವಣೆ ವಿಷಯ ಪದೇ ಪದೆ ಕೇಳುವುದು ಸರಿ ಅಲ್ಲ. ಈ ವಿಷಯವನ್ನು ಯಾರೂ ಪ್ರಸ್ತಾಪಿಸಬೇಡಿ. ಇಲ್ಲಿಗೆ ಅದನ್ನು ಕೈಬಿಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಎಸ್‌ವೈ ಅಧಿಕಾರ ಅವಧಿ ಪೂರ್ಣಗೊಳಿಸಲಿದ್ದಾರೆ. ಅವರ ಮುಂದಾಳತ್ವದಲ್ಲೇ ಮುಂಬರುವ ವಿಧಾನಸಭೆ ಚುನಾವಣೆ ಎದುರಿಸಲಿದ್ದೇವೆ. ಈ ಕುರಿತು ಪಕ್ಷದ ವರಿಷ್ಠರೇ ಸ್ಪಷ್ಟಪಡಿ ಸಿದ್ದಾರೆ. ಹಾಗಾಗಿ ಮಾಧ್ಯಮ ದವರು ಈ ವಿಷಯ ಪ್ರಸ್ತಾಪಿಸಬಾರದು ಎಂದರು.

ಕರೊನಾ, ಗ್ರಾಪಂ ಚುನಾವಣೆ ಇತರ ಕಾರಣಗಳಿಂದ ಸಚಿವ ಸಂಪುಟ ವಿಸ್ತರಣೆ ವಿಳಂಬ ವಾಗಿದೆ. ಈ ವಿಚಾರ ವಾಗಿ ಯಡಿಯೂರಪ್ಪ ಶೀಘ್ರ ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಬೆಂಗಳೂರು, ಮಂಗಳೂರು ಪಾಲಿಕೆ ಚುನಾವಣೆ ಬೇರೆ. ಬೆಳಗಾವಿ ಪಾಲಿಕೆ ಚುನಾವಣೆ ವಿಷಯವೇ ಬೇರೆ. ಬೆಳಗಾವಿ ಪಾಲಿಕೆಗೆ ಸಂಬಂಧಿಸಿ ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರು ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ. ಸ್ಥಳೀಯ ನಾಯಕರು ಯಾರು ನಿರ್ಣಯ ತೆಗೆದುಕೊಳ್ಳುವುದಿಲ್ಲ ಎಂದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಬೇಕು ಎಂಬ ಸಂಕಲ್ಪ ಮಾಡಿದ್ದೇವೆ. ಈ ನಿಟ್ಟಿನಲ್ಲಿ ಈಗಿನಿಂದಲೇ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಗ್ರಾಪಂ ಚುನಾವಣೆ ನೀತಿ ಸಂಹಿತೆ ಮುಗಿದ ನೀರಾವರಿ ಯೋಜನೆಗಳ ಅನುಷ್ಠಾನ ಕುರಿತು ಪ್ರವಾಸ ಕೈಗೊಳ್ಳಲಿದ್ದೇನೆ ಎಂದು ತಿಳಿಸಿದರು.

ಅಂಗಡಿ ಕುಟುಂಬಕ್ಕೆ ಟಿಕೆಟ್?

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ರಮೇಶ ಜಾರಕಿಹೊಳಿ ಅವರು, ದಿ.ಸುರೇಶ ಅಂಗಡಿ ಕುಟುಂಬಸ್ಥರಿಗೆ ಟಿಕೆಟ್ ನೀಡುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆದರೆ, ಪಕ್ಷದ ವರಿಷ್ಠರು ಟಿಕೆಟ್ ನೀಡುವ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತೇವೆ. ಬಿಜೆಪಿ ಕಾರ್ಯಕ್ರಮದಲ್ಲಿ ಶ್ರದ್ಧಾ ಶೆಟ್ಟರ್ ಭಾಗವಹಿಸಿರುವುದು ಸಾಮಾನ್ಯ ವಿಷಯ. ಅದನ್ನು ತಪ್ಪಾಗಿ ತಿಳಿದುಕೊಳ್ಳುವುದು ಸರಿ ಅಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net