

ಬೆಂಗಳೂರು: ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗದೆ ವ್ಯಾಪಿಸುತ್ತಿರುವ ಕರೊನಾ ಸೋಂಕಿನ ಪರಿಸ್ಥಿತಿ ನಿಭಾಯಿಸುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಭೆ ನಡೆಸಿದ್ದು, ಒಂದಷ್ಟು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡು ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ಕುರಿತು ಸಭೆ ನಡೆಸಿದ ಸಿಎಂ ಬೊಮ್ಮಾಯಿ, ಬೂಸ್ಟರ್ ಡೋಸ್ ಅಭಿಯಾನಕ್ಕೆ ವೇಗ ಕೊಡಲು ಸೂಚನೆ ನೀಡಿದರು. ಸೋಂಕಿತರಾಗಿ ಹೋಮ್ ಐಸೋಲೇಷನ್ನಲ್ಲಿ ಇರುವವರ ಮೇಲೆ ಹೆಚ್ಚಿನ ನಿಗಾ ಇಡಲು ತಿಳಿಸಿರುವ ಅವರು, ಸೋಂಕು ಕಡಿಮೆ ಆಗುವವರೆಗೂ ಐಸೋಲೇಷನ್ನಲ್ಲೇ ಇರಿಸುವಂತೆ ತಿಳಿಸಿದರು.
ಸಭೆಯಲ್ಲಿ ಸಚಿವರಾದ ಡಾ.ಕೆ.ಸುಧಾಕರ್, ಬಿ.ಸಿ. ನಾಗೇಶ್, ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್ ಮತ್ತು ಇತರ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.