ಸಿಎಂ ಭೇಟಿಯಾದ ಜಿಲ್ಲಾ ಕಾಂಗ್ರೆಸ್ ನಿಯೋಗ

CM CONG
Published on

ಮಡಿಕೇರಿ:
ಕೊಡಗು ಜಿಲ್ಲಾ ಕಾಂಗ್ರೆಸ್ ನಿಯೋಗ ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವ ಪ್ರಯತ್ನ ಮಾಡಿತು. ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್ವಿಂಗಡಣೆ ಸಂದರ್ಭ ಈ ಮೊದಲಿದ್ದ ೨೯ ಕ್ಷೇತ್ರಗಳ ಪೈಕಿ ೪ ಕ್ಷೇತ್ರಗಳನ್ನು ಕೈಬಿಡಲಾಗಿದ್ದು, ಇದನ್ನು ಪರಿಶೀಲಿಸಿ ಮುಂದಿನ ಚುನಾವಣೆ ಸಂದರ್ಭ ಎಲ್ಲಾ ೨೯ ಕ್ಷೇತ್ರಗಳಿಗೂ ಚುನಾವಣೆ ನಡೆಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಯಿತು.

ಅಭಿವೃದ್ಧಿ ವಿಷಯದಲ್ಲಿ ಕೊಡಗು ಹಿಂದುಳಿದಿದ್ದು ಸರ್ಕಾರ ಸ್ಪಂದಿಸಬೇಕು ಎಂದು ಕೂಡ ಕೋರಿಕೆ ಸಲ್ಲಿಸಲಾಯಿತು. ಕೊಡಗು ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲು ಮತ್ತು ಮಳೆ ಕೊರತೆ ಹಿನ್ನೆಲೆ ಸರ್ಕಾರ ಘೋಷಣೆ ಮಾಡಿರುವ ಬರಪೀಡಿತ ಪ್ರದೇಶಗಳಿಗೆ ಹೆಚ್ಚಿನ ಅನುದಾನ ನೀಡಬೇಕೆಂದು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಯಿತು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ಬೋಸ್‌ರಾಜ್, ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಪಧಾಧಿಕಾರಿಗಳು ಮತ್ತು ಸದಸ್ಯರುಗಳು, ಕೆಪಿಸಿಸಿಯ ಪ್ರಮುಖರು ಮತ್ತು ಸದಸ್ಯರುಗಳು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರುಗಳು ಹಾಗೂ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಈ ಸಂದರ್ಭ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net