

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇದೀಗ ಎರಡನೇ ಸಲ ಕರೊನಾ ಸೋಂಕಿಗೆ ಒಳಗಾಗಿ, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮತ್ತೊಂದೆಡೆ ಖಾಸಗಿ ಹೋಟೆಲೊಂದರ 40 ಸಿಬ್ಬಂದಿಗೆ ಈಗ ಕೋವಿಡ್ ಸೋಂಕಿನ ಆತಂಕ ಎದುರಾಗಿದೆ.
ಕೋವಿಡ್-10 ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗುವುದಕ್ಕೂ ಮುನ್ನ ಸಿಎಂ ಯಡಿಯೂರಪ್ಪ ಅವರು ಬೆಳಗಾವಿಯ ಖಾಸಗಿ ಹೋಟೆಲೊಂದರಲ್ಲಿ ಎರಡು ದಿನ ತಂಗಿದ್ದರು. ಉಪ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಾರ್ಥವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸ ಮಾಡಿದ್ದ ಸಿಎಂ, ಸಚಿವ ಉಮೇಶ್ ಕತ್ತಿ ಮಾಲೀಕತ್ವದ ಯುಕೆ-27 ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದರು. ಹೀಗಾಗಿ ಈ ಹೋಟೆಲ್ನ 40 ಜನ ಸಿಬ್ಬಂದಿಗೆ ಇಂದು ಕೋವಿಡ್ ಟೆಸ್ಟ್ ಮಾಡಿಸಲಾಗಿದೆ.