

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದಾವಣಗೆರೆ ಪ್ರವಾಸ ರದ್ದಾಗಿದೆ. ಪೂರ್ವನಿಗದಿಯಂತೆ ಇಂದು ಅವರು ದಾವಣಗೆರೆ ಪ್ರವಾಸ ಕೈಗೊಳ್ಳಬೇಕಿದ್ದು, ಬೆಳಗ್ಗೆ 11.15ಕ್ಕೆ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ಬರಬೇಕಾಗಿತ್ತು. ಆದರೆ ಪ್ರತಿಕೂಲ ಹವಾಮಾನದಿಂದಾಗಿ ಬಿಎಸ್ವೈ ಅವರ ದಾವಣಗೆರೆ ಪ್ರವಾಸ ರದ್ದು ಮಾಡಲಾಗಿದೆ ಎಂದು ಸಿಎಂ ಅವರ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ.ಚನ್ನಬಸವೇಶ ತಿಳಿಸಿದ್ದಾರೆ.
ಚುನಾವಣಾ ಪ್ರಚಾರ: ತುಮಕೂರಿನಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಅಭ್ಯರ್ಥಿ ಪರ ಪ್ರಚಾರಾರ್ಥ ಮಧ್ಯಾಹ್ನ 2.30ರ ಸುಮಾರಿಗೆ ನಗರದ ವಿನಾಯಕ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂ ಭಾಗಿ ಆಗಲಿದ್ದಾರೆ.