ಸಿಎಂ ಚೇತರಿಕೆಗೆ ಶಾಸಕಿ ಲಕ್ಷ್ಮೀ ಪ್ರಾರ್ಥನೆ

Laxmi Hebbalkar
Published on

ಬೆಳಗಾವಿ: ಕರೊನಾ ಸೋಂಕು ತಗುಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗಲಿ. ಈ ಎಲ್ಲ ನಾಯಕರ ಆರೋಗ್ಯ ಆದಷ್ಟು ಬೇಗ ಸುಧಾರಿಸಿ ಇವರೆಲ್ಲ ಜನಸೇವೆಗೆ ಮರಳುವಂತಾಗಲಿ ಎಂದು ಶಾಸಕಿ ಲಕ್ಷೀ ಹೆಬ್ಬಾಳ್ಕರ್ ಪ್ರಾರ್ಥಿಸಿದ್ದಾರೆ.

ಸಾರ್ವಜನಿಕ ಜೀವನದಲ್ಲಿರುವವರು ದೈಹಿಕ ಅಂತರ ಕಾಪಾಡಿಕೊಳ್ಳುವುದು ತುಂಬ ಕಷ್ಟದ ಕೆಲಸ. ಆದರೂ ಆರೋಗ್ಯ ಮುಖ್ಯವಾಗಿರುವುದರಿಂದ ಎಲ್ಲರೂ ಹೆಚ್ಚಿನ ಮುತುವರ್ಜಿ ವಹಿಸಬೇಕು. ಎಲ್ಲರೂ ದೈಹಿಕ ಅಂತರ ಕಾಪಾಡಿಕೊಳ್ಳಬೇಕು, ಮಾಸ್ಕ್ ಧರಿಸುವುದನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net